Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಲಪಾಡ್ ಹಲ್ಲೆ ಕೇಸ್ ಸಿಸಿಬಿಗೆ- ದಿನ ಕಳೆದ್ರೂ ಹ್ಯಾರಿಸ್ ಪುತ್ರನ ಬಂಧಿಸದ ಖಾಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಲಪಾಡ್ ಹಲ್ಲೆ ಕೇಸ್ ಸಿಸಿಬಿಗೆ- ದಿನ ಕಳೆದ್ರೂ ಹ್ಯಾರಿಸ್ ಪುತ್ರನ ಬಂಧಿಸದ ಖಾಕಿ

Bengaluru City

ನಲಪಾಡ್ ಹಲ್ಲೆ ಕೇಸ್ ಸಿಸಿಬಿಗೆ- ದಿನ ಕಳೆದ್ರೂ ಹ್ಯಾರಿಸ್ ಪುತ್ರನ ಬಂಧಿಸದ ಖಾಕಿ

Public TV
Last updated: February 19, 2018 7:33 am
Public TV
Share
2 Min Read
Harries Son F
SHARE

ಬೆಂಗಳೂರು: ನಗರದ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರ ನಲ್ಪಾಡ್ ಅಂಡ್ ಟೀಮ್ ಕುಡಿದು ವಿದ್ವತ್ ಎಂಬ ಯುವಕ ಮೇಲೆ ಮಾರಣಾಂತಿಕ ಹಲ್ಲೆ ನಡೆದು 24 ಗಂಟೆ ಕಳೆದಿದೆ. ಆದರೂ ಎ1 ಆರೋಪಿ ನಲಪಾಡ್ ನಾಪತ್ತೆಯಾಗಿದ್ದಾನೆ.

ಪೊಲೀಸರು ಎಷ್ಟೇ ಹುಡುಕಿದರೂ ಪತ್ತೆಯಾಗಿಲ್ಲ. ಇತ್ತ ಪ್ರಕರಣವನ್ನು ಸಿಸಿಬಿಗೆ ವರ್ಗಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಆದೇಶಿಸಿದ್ದು, ಸಿಸಿಬಿ ಪೋಲಿಸ್ರು ನಲಪಾಡ್‍ಗೆ ಬಲೆ ಬೀಸಿದ್ದಾರೆ. ಕಾಸರಗೋಡು ರೆಸಾರ್ಟ್ ಸೇರಿದಂತೆ ಹಲವು ಕಡೆ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹ್ಯಾರಿಸ್ ಪುತ್ರನಿಂದ ಯುವಕನ ಮೇಲೆ ಹಲ್ಲೆ ಪ್ರಕರಣ- ಆರೋಪಿಗಳನ್ನು ಬಂಧಿಸದಿದ್ದರೆ ಪೊಲೀಸರೇ ನೇರ ಹೊಣೆ: ರಾಮಲಿಂಗಾ ರೆಡ್ಡಿ

Nalapad

ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್‍ನ ಆರು ಮಂದಿ ಸಹಚರರನ್ನು ಸಿಸಿಬಿಗೆ ಒಪ್ಪಿಸಿದ್ದು, ಸಿಸಿಬಿ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕುತ್ತಿದ್ದಾರೆ. ಪೊಲೀಸರೇ ಬಂದು ನಲಪಾಡ್‍ನನ್ನು ಅರೆಸ್ಟ್ ಮಾಡಿದ್ರೆ ಜಾಮೀನು ಸಿಗಲ್ಲ. ಹೀಗಾಗಿ ಜಾಮೀನಿಗೋಸ್ಕರ ಸ್ವತಃ ತಾನೇ ಪೊಲೀಸರ ಮುಂದೆ ಶರಣಾಗುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ಪುತ್ರನಿಂದ ಹಲ್ಲೆ ಪ್ರಕರಣ ಕುರಿತು ಶಾಸಕ ಹ್ಯಾರಿಸ್ ಪ್ರತಿಕ್ರಿಯಿಸಿದ್ದು ಹೀಗೆ

Harris 2

ಏನಿದು ಘಟನೆ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾನೆ. ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕನಾಗಿದ್ದು, ಇವರು ಇತ್ತೀಚೆಗೆ ವಿದ್ವತ್ ಸಿಂಗಾಪೂರ್‍ನಲ್ಲಿ ಪದವಿ ಮುಗಿಸಿ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಹ್ಯಾರಿಸ್ ಮಗನ ಗೂಂಡಾಗಿರಿ -ರೆಸ್ಟೊರೆಂಟ್‍ನಲ್ಲಿ ಯುವಕನಿಗೆ ರಕ್ತ ಬರುವಂತೆ ಥಳಿಸಿ, ಆಸ್ಪತ್ರೆಗೂ ನುಗ್ಗಿ ಹಲ್ಲೆ

Harris 1

ಹಲ್ಲೆಗೊಳಗಾದ ವಿದ್ವತ್ ರನ್ನು ನಗರದ ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಷ್ಟಕ್ಕೆ ಸುಮ್ಮನಾಗದ ಶಾಸಕರ ಪುತ್ರ ಮತ್ತು ಆತನ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ವಿದ್ವತ್ ಸಹೋದರ ಸಾತ್ವಿಕ್ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈ ಸಂಬಂಧ ಮಹಮ್ಮದ್ ನಲಪಾಡ್ ಹ್ಯಾರಿಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಯಾಗಿರುವ ಶಾಸಕರ ಪುತ್ರ ಮಹಮ್ಮದ್ ನಲಪಾಡ್ ಪರಾರಿಯಾಗಿದ್ದಾನೆ.

Harris 3

vlcsnap 2018 02 18 11h08m36s641

vlcsnap 2018 02 18 11h08m26s773
ವಿದ್ವತ್- ಹಲ್ಲೆಗೊಳಗಾದ ಯುವಕ.
TAGGED:assaultbengaluruharrisnalapadpolicepublictvsonyouthನಲಪಾಡ್ಪಬ್ಲಿಕ್ ಟಿವಿಪುತ್ರಪೊಲೀಸ್ಬೆಂಗಳೂರುಯುವಕಹಲ್ಲೆಹ್ಯಾರಿಸ್
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Farm Pond
Latest

ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
27 minutes ago
suchitra kamalakar bhat case
Crime

ಗಂಡನಿಲ್ಲದ ವೇಳೆ ಜಮೀನ್ದಾರ್‌ಗೆ ಸುಚಿತ್ರಾ ಬುಲಾವ್; ಕಲಬುರಗಿ ಜಮೀನ್ದಾರ ಜೊತೆ 3 ವರ್ಷ ಲವ್ವಿ-ಡವ್ವಿ

Public TV
By Public TV
45 minutes ago
Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
2 hours ago
Sandalwood Farmer protest against government in Chikkamagaluru Tarikere
Chikkamagaluru

ಬದುಕಿದ್ದಾಗಲೇ ವೈಕುಂಠ ಸಮಾರಾಧನೆಗೆ ಅಧಿಕಾರಿಗಳಿಗೆ ಆಹ್ವಾನ – ಶ್ರೀಗಂಧ ಬೆಳೆಗಾರನ ವಿನೂತನ ಪ್ರತಿಭಟನೆ

Public TV
By Public TV
2 hours ago
BMTC Staff jewellery
Bengaluru City

ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ

Public TV
By Public TV
2 hours ago
new zealand defeated afghanistan by 5 wickets in 4th match of t20 world cup
Cricket

T20 World Cup​ | ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್‌ಗೆ 5 ವಿಕೆಟ್‌ಗಳ ಜಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?