ಪ್ರತಾಪ್ ಸಿಂಹ ಕಾರ್ಯ ವೈಖರಿಗೆ ಶಹಬ್ಬಾಸ್ ಎಂದ ಪ್ರಧಾನಿ ಮೋದಿ

Public TV
1 Min Read
Pratap Simha 2 1

ಮೈಸೂರು: ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಾರ್ಯವೈಖರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಮಹಾರಾಜ ಕಾಲೇಜಿನಲ್ಲಿ ಆಯೋಜನೆಗೊಂಡಿದ್ದ ಬಿಜೆಪಿ ಪರಿವರ್ತನಾ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ನಿಮ್ಮ ಕ್ಷೇತ್ರದ ಸಂಸದರಾದ ಪ್ರತಾಪ ಸಿಂಹ ನಮ್ಮ ಬಳಿಗೆ ಯಾವಾಗಲೂ ಯಾವುದಾದರೂ ಯೋಜನೆ ಹಿಡಿದು ಬರುತ್ತಾರೆ. ನಮ್ಮನ್ನು ನೆಮ್ಮದಿಯಿಂದ ಕೂರಲು ಬಿಡಲ್ಲ ಎಂದು ಹೇಳಿದರು.

Pratap Simha 3

ಇದೇ ವೇಳೆ ಬೆಂಗಳೂರು ಮೈಸೂರು ನಡುವೆ ಅಷ್ಟಪಥಗಳ ರಾಷ್ಟ್ರೀಯ ಹೆದ್ದಾರಿ ರಚನೆಗೆ ಕೇಂದ್ರ ಸರ್ಕಾರ ಅನುಮತಿಸಿದೆ ನೀಡಿರುವ ಬಗ್ಗೆ ತಿಳಿಸಿದರು. ಅಲ್ಲದೆ ಮೈಸೂರಿಗೆ ಹೊಸ ವಿಶ್ವದರ್ಜೆಯ ಸ್ಯಾಟಲೈಟ್ ರೈಲ್ವೆ ಸ್ಟೇಷನ್ ಅನ್ನು ನಾಗನಹಳ್ಳಿ ಬಳಿ ನಿರ್ಮಾಣ ಮಾಡಲಾಗುತ್ತದೆ. ಇದರಿಂದ 76 ರೈಲುಗಳು ಮೈಸೂರಿಗೆ ಆಗಮಿಸಲು ಹಾಗೂ ನಿರ್ಗಮಿಸಲು ಸಾಧ್ಯವಾಗುತ್ತದೆ ಎಂದರು. ಇದನ್ನೂ ಓದಿ: Commission ಸರ್ಕಾರವನ್ನು ತೊಲಗಿಸಿ Mission ಸರ್ಕಾರವನ್ನು ತನ್ನಿ: ಪ್ರಧಾನಿ ಮೋದಿ

Pratap Simha 1

ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕದಲ್ಲಿ ಬಂಡಲ್ ಬಂಡಲ್ ನೋಟುಗಳು ಸಿಗುತ್ತವೆ. ಡೈರಿಗಳು ಸಿಗುತ್ತವೆ. ಅವುಗಳಲ್ಲಿ ಏನೇನು ಬರೆದಿದೆ. ಎಷ್ಟೆಷ್ಟು ಹಂಚಿಕೆಯ ವಿವರಗಳಿವೆ ಎಂಬುವುದು ಯಾರಿಗೆ ಗೊತ್ತು. ಅಂತಹ ವ್ಯಕ್ತಿಗಳಿಗೆ ಬೆಂಬಲ ನೀಡಿದರೆ ಮೈಸೂರಿಗೆ ಕೆಟ್ಟ ಹೆಸರು ಬರುತ್ತದೆ. ಮೈಸೂರಿನಲ್ಲಿ ಹುಟ್ಟಿದ ವ್ಯಕ್ತಿ ಕೆಟ್ಟ ಕೆಲಸ ಮಾಡುವುದಿಲ್ಲ. ಆದರೆ ಆ ವ್ಯಕ್ತಿ ಇಲ್ಲಿ ಹುಟ್ಟಿ ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯೆ ನೈತಿಕತೆ ಬಿಟ್ಟಿದ್ದಾರೆ. ಹಗರಣಗಳ ಮೇಲೆ ಹಗರಣ ಹೊರ ಬರುತ್ತಿದೆ. ಕೇಂದ್ರ ಸರ್ಕಾರ ಕೊಟ್ಟ ಅನುದಾನವನ್ನು ಬಳಕೆ ಮಾಡಿಕೊಳ್ಳದೇ ರಾಜಕಾರಣಕ್ಕಾಗಿ ಹಾಗೂ ಹೈಕಮಾಂಡ್ ನಾಯಕರನ್ನು ಖುಷಿ ಪಡಿಸಲು, ಅವರಿಗೆ ಕಾಣಿಕೆ ಸಲ್ಲಿಸಲು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Pratap Simha 4

 

 

Share This Article
Leave a Comment

Leave a Reply

Your email address will not be published. Required fields are marked *