ಮಗ ತಪ್ಪು ಮಾಡಿದ್ರೆ ಅಪ್ಪನ ಮೇಲೆ ಕ್ರಮ ತೆಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್ ನಲ್ಲಿದೆ- ಸಚಿವ ಜಾರ್ಜ್ ಪ್ರಶ್ನೆ

Public TV
2 Min Read
GEORGE HARRIS

ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ವಿಚಾರಕ್ಕಿಂತ ಸಂತೋಷ್ ವಿಚಾರದ ಬಗ್ಗೆ ಬಿಜೆಪಿಯವರು ಮಾತನಾಡಲಿ. ಮಗ ತಪ್ಪು ಮಾಡಿದ್ರೆ ಅಪ್ಪನ ಮೇಲೆ ಕ್ರಮ ತಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್ ನಲ್ಲಿದೆ ಎಂದು ಪ್ರಶ್ನಿಸಿ ಬಿಜೆಪಿ ನಾಯಕರ ವಿರುದ್ಧ ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಕಿಡಿಕಾರಿದ್ದಾರೆ.

ವಿಧಾನಸೌಧದದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ಸ್ವತಃ ವಿನಯ್ ಹಲ್ಲೆಗೊಳಗಾಗಿದ್ದಾರೆ. ಅವರ ಪತ್ನಿ ಪತ್ರ ಬರೆದರೂ ಬಿಎಸ್ ವೈ ಪ್ರತಿಕ್ರಿಯೆ ಕೊಟ್ಟಿಲ್ಲ. ಊರೆಲ್ಲ ಸುತ್ತುವ ಇವರಿಗೆ ಠಾಣೆಗೆ ಬರಲು ವಯಸ್ಸಿನ ಸಮಸ್ಯೆ. ಮೊದಲು ಸಂತೋಷ್ ಪ್ರಕರಣದ ಬಗ್ಗೆ ಬಿಜೆಪಿಯವರು ಮಾತನಾಡಲಿ. ಮಗ ತಪ್ಪು ಮಾಡಿದ್ರೆ ಅಪ್ಪನ ಮೇಲೆ ಕ್ರಮ ತೆಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್ ನಲ್ಲಿದೆ ಅಂತ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

vlcsnap 2018 02 20 14h12m12s150

ಕೆಆರ್ ಪುರಂ  ಬಿಬಿಎಂಪಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪೆಟ್ರೋಲ್ ಸುರಿದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಬಿಜೆಪಿ ಎನ್ನುವ ಪ್ರಶ್ನೆ ಇಲ್ಲ. ತಪ್ಪು ಯಾರೇ ಮಾಡಿದ್ರೂ ತಪ್ಪೇ. ಪೊಲೀಸರು ಆ ಬಗ್ಗೆ ಕ್ರಮ ತೆಗೆದುಕೊಳ್ತಾರೆ ಎಂದರು.

SANTHOSH 1

ರಾಜ್ಯ ಸರ್ಕಾರ ಶೇ.10 ಪರ್ಸೆಂಟ್ ಗಿಂತ ಹೆಚ್ಚಿನ ಕಮೀಷನ್ ಸರ್ಕಾರ ಎಂಬ ಪ್ರಧಾನಿ ಮೋದಿ ಆರೋಪದ ವಿಚಾರದ ಕುರಿತು ಮಾತನಾಡಿದ ಅವರು, ಮೋದಿಯವರು ಬಿಜೆಪಿಯ ಪ್ರಧಾನಿ ಅಲ್ಲ. ಬದಲಾಗಿ ಅವರು ದೇಶದ ಪ್ರಧಾನಿ. ಪ್ರಧಾನಿ ಹುದ್ದೆಯಲ್ಲಿದ್ದುಕೊಂಡು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ. ನೋಟ್ ಬ್ಯಾನ್ ನಂತಹ ಜನರಿಗೆ ತೊಂದರೆ ಕೊಡುವ ಕಾರ್ಯಕ್ರಮ ಮಾಡಿದ್ರು ಹೊರತು ಬೇರೆ ಇಲ್ಲ. ಗುಜರಾತಿನಲ್ಲಿ ಪೆಟ್ರೋ ಕೆಮಿಕಲ್ಸ್ ಯೋಜನೆಯಿಂದ 20 ಸಾವಿರ ಕೋಟಿ ರೂ. ನಷ್ಟವಾಯಿತು. ಇದಕ್ಕೆ ಹೊಣೆ ಯಾರು? ಈ ನಷ್ಟವನ್ನು ಮೋದಿಯವರು ಕೇಂದ್ರ ಸರಕಾರದ ಸಬ್ಸಿಡಿಯಿಂದ ಭರ್ತಿ ಮಾಡ್ಕೋತಿದ್ದಾರೆ. ಪ್ರಧಾನಿಯಾಗಿ ಅವರು 4 ವರ್ಷ ಸಾಧನೆ ಮಾಡಿಲ್ಲ. ಅದಕ್ಕಾಗಿ ಮೋದಿಯವರು ರಾಜ್ಯ ಸರಕಾರದ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ. ಎಲ್ಲ ರಾಜ್ಯಗಳಿಗೂ ಬಂದು ಸುಳ್ಳು ಆರೋಪಗಳ ಮೂಲಕ ಮೋದಿಯವರು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬರುವಂತೆ ಮಾತಾಡುವುದು ಸರಿಯಲ್ಲ ಅಂತ ಹೇಳಿದ್ರು.

HARRISH

ಮೈಸೂರಿನಿಂದ ಬೆಂಗಳೂರಿಗೆ ಬಂದ ಸಿದ್ದರಾಮಯ್ಯ ದಾರಿತಪ್ಪಿದ್ದಾರೆ ಎನ್ನುವ ಮೋದಿ ಹೇಳಿಕೆಗೆ, ಮೈಸೂರಿಂದ ಬಂದ ಹಲವರು ರಾಜಕಾರಣದಲ್ಲಿ ಸಾಧನೆ ಮಾಡಿದ್ದಾರೆ. ಆ ವಿಷಯ ಮೋದಿಯವರಿಗೆ ಗೊತ್ತಿಲ್ಲ ಎಂದು ಹೇಳಿದರು.

Harris 2

vlcsnap 2018 02 18 11h08m26s773
ವಿದ್ವತ್- ಹಲ್ಲೆಗೊಳಗಾದ ಯುವಕ.

Harris 3

BJP

Share This Article
Leave a Comment

Leave a Reply

Your email address will not be published. Required fields are marked *