ಮಂಗಳೂರು: ಅಮಿತ್ ಶಾ ಸಮಾವೇಶ ಮುಗಿಸಿ ಬರುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಮಲ್ಪೆಯಲ್ಲಿ ನಡೆದ ಸಮಾವೇಶದಿಂದ ವಾಪಸ್ಸಾಗುವ ವೇಳೆ ಮಂಗಳೂರಿನ ಬೆಂಗ್ರೆಯಲ್ಲಿ ಈ ಘಟನೆ ನಡೆದಿದೆ. ಬಸ್ ಅಡ್ಡಗಟ್ಟಿದ ಕಿಡಿಗೇಡಿಗಳು ಚೂರಿಯಿಂದ ಇರಿದಿದ್ದಾರೆ. ಪರಿಣಾಮ ಡಿಸಿಪಿ, ಎಸಿಪಿ, ಪಿಎಸ್‍ಐ ಸೇರಿದಂತೆ ಹಲವು ಪೊಲೀಸರಿಗೆ ಗಾಯಗಳಾಗಿವೆ.
ಘಟನೆಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ನಂತರ ಗುಂಪು ಚದುರಿಸಲು ಪೊಲೀಸರಿಂದ ಲಾಠಿಚಾರ್ಜ್ ನಡೆದು, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.