ಇಂದು ಪುಟ್ಟಣ್ಣಯ್ಯ ಅಂತ್ಯಕ್ರಿಯೆ- ತವರಿನತ್ತ ಹೊರಟ ಪಾರ್ಥಿವ ಶರೀರ

Public TV
1 Min Read
puttanayya

ಮೈಸೂರು/ಮಂಡ್ಯ: ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅಂತ್ಯಕ್ರಿಯೆ ಇಂದು ಹುಟ್ಟೂರು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ನಡೆಯಲಿದೆ.

puttanaiah 4

ಈಗಾಗಲೇ ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಯಿಂದ ಮೃತದೇಹದ ಮೆರವಣಿಗೆ ಸ್ವಗ್ರಾಮ ಕ್ಯಾತನಹಳ್ಳಿಯತ್ತ ಹೊರಟಿದೆ. ನಂತರ ಕ್ಯಾತನಹಳ್ಳಿಯ ಸರ್ಕಾರಿ ಶಾಲಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆಯವರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತೆ.

puttanaiah 5

ಪುಟ್ಟಣ್ಣಯ್ಯ ಮೌಢ್ಯ ವಿರೋಧಿಯಾದ ಕಾರಣ ಯಾವುದೇ ವಿಧಿವಿಧಾನಗಳಿಲ್ಲದ ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ನಂತರ ತೆಂಗಿನ ತೋಟದಲ್ಲಿ ಅವರ ತಂದೆ ಮತ್ತು ತಾಯಿಯ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಲಾಗುತ್ತದೆ.

puttanaiah 7

ಪುಟ್ಟಣ್ಣಯ್ಯ ಎಲ್ಲರನ್ನೂ ಸಮನವಾಗಿ ಕಾಣುತ್ತಿದ್ದರು. ಹೀಗಾಗಿ ಅವರ ಪಾರ್ಥಿವ ಶರೀರಕ್ಕೆ ದಲಿತ ಮಹಿಳೆಯಿಂದ ಮೊದಲಿಗೆ ಪೂಜೆ ನಡೆಯಲಿದೆ ಎಂದು ಪಬ್ಲಿಕ್ ಟಿವಿಗೆ ಪುಟ್ಟಣ್ಣಯ್ಯ ಪುತ್ರ ದರ್ಶನ್ ಹೇಳಿದ್ದಾರೆ.

puttanaiah 13

ಗಣ್ಯ ವ್ಯಕ್ತಿಗಳ ನಿಧನಕ್ಕೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ವಿಚಾರವಾಗಿ ಶಾಸಕ ಪುಟ್ಟಣ್ಣಯ್ಯ ರಜೆ ಘೋಷಣೆಯನ್ನು ವಿರೋಧಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಇಂದು ಮಂಡ್ಯ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಸ್ಪಷ್ಟನೆ ನೀಡಿದ್ದಾರೆ.

puttanaiah 11

puttanaiah 10

puttanaiah 8

puttanaiah 9

puttanaiah 12

puttanaiah 6

puttanaiah 1

puttanaiah 3

puttanaiah 2

Share This Article
Leave a Comment

Leave a Reply

Your email address will not be published. Required fields are marked *