ಕೊನೆಯ ಟಿ20ಯಲ್ಲಿ ವಿಶೇಷ ಸಾಧನೆ ನಿರ್ಮಿಸಿದ ರೋಹಿತ್ ಶರ್ಮಾ

Public TV
1 Min Read
rohith sharma

ಕೇಪ್‍ಟೌನ್: ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಪರ ವಿಶೇಷ ಸಾಧನೆ ನಿರ್ಮಿಸಿದ್ದಾರೆ.

ವಿದೇಶ ಪ್ರವಾಸದಲ್ಲಿ ಮೊದಲ ಪಂದ್ಯದಲ್ಲೇ ಜಯಗಳಿಸಿದ ಟೀಂ ಇಂಡಿಯಾದ ಮೊದಲ ನಾಯಕ ಎನ್ನುವ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ. ಕೊನೆಯ ಟಿ20 ಪಂದ್ಯದ ವೇಳೆ ಕೊಹ್ಲಿ ಬೆನ್ನು ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿತ್ತು.

ಭಾರತದ ಪರ ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಮೊದಲ ನಾಯಕನಾಗಿದ್ದರೆ, ಏಷ್ಯಾದಲ್ಲಿ ಈ ಸಾಧನೆ ನಿರ್ಮಿಸಿದ 6ನೇ ನಾಯಕ ಎನ್ನುವ ಪಟ್ಟ ಈಗ ಒಲಿದಿದೆ.

team india south africa tour

ಕೊನೆಯ ಟಿ 20 ಪಂದ್ಯವನ್ನು ಭಾರತ 7 ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಟಿ20 ಸರಣಿಯಲ್ಲಿ 2-1 ಅಂತರದಿಂದ ಗೆದ್ದುಕೊಂಡು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಕ್ತಾಯಗೊಳಿಸಿದೆ. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಭಾರತ 7 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತ್ತು. ದಕ್ಷಿಣ ಆಫ್ರಿಕಾ 6 ವಿಕೆಟ್ ಕಳೆದುಕೊಂಡು 165 ರನ್ ಗಳಿಸಿ ಸೋಲನ್ನು ಒಪ್ಪಿಕೊಂಡಿತ್ತು.

ಬ್ಯಾಟಿಂಗ್ ನಲ್ಲಿ 43 ರನ್(27 ಎಸೆತ, 5 ಬೌಂಡರಿ, 1 ಸಿಕ್ಸರ್) ಸಿಡಿಸಿ ಬೌಲಿಂಗ್ ನಲ್ಲಿ ಒಂದು ವಿಕೆಟ್ ಕಿತ್ತ ಸುರೇಶ್ ರೈನಾ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಭುವನೇಶ್ವರ್ ಕುಮಾರ್ ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾದರು.

raina suresh

bumra

bhuvaneshwar and raina

ravi shastri and kohli

team india 2

team india

Share This Article
Leave a Comment

Leave a Reply

Your email address will not be published. Required fields are marked *