ಬೆಂಗಳೂರು: ಕೆಸಿ ವ್ಯಾಲಿ ಕಾಮಗಾರಿ ವೇಳೆ ಮಣ್ಣಿನ ದಿಬ್ಬ ಕುಸಿದ ಪರಿಣಾಮ ಮಣ್ಣಿನಡಿಯಲ್ಲಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಮಹದೇವಪುರದ ಬಳಿ ನಡೆದಿದೆ.
ಮೃತರನ್ನು ಉತ್ತರ ಭಾರತ ಮೂಲದ ಸಂದೀಪ್(24) ಅಖಿಲೇಶ್ ಯಾದವ್(26) ಎಂದು ಗುರುತಿಸಲಾಗಿದೆ. ಕೆಆರ್ ಪುರದ ಬಳಿ ನಡೆಯುತ್ತಿರುವ ಕೆಸಿ ವ್ಯಾಲಿ ಕಾಮಗಾರಿ ಸ್ಥಳದಲ್ಲಿ ಘಟನೆ ನಡೆದಿದೆ. ಈ ವೇಳೆ ಎಂಜಿನಿಯರ್ ಉಮಾಶಂಕರ್ ಎಂಬವರನ್ನು ರಕ್ಷಣೆ ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳದಲ್ಲಿ ಮೃತ ಪಟ್ಟ ಕಾರ್ಮಿಕರ ಕುಟುಂಬದವರ ಅಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.