ಶಿವಮೊಗ್ಗ: ಜಿಲ್ಲೆಯ ಹಲವೆಡೆ ಭಾನುವಾರ ರಾತ್ರಿ ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ರಿಪ್ಪನ್ ಪೇಟೆ ಸಮೀಪದ ಬಿಳಕಿ ಗ್ರಾಮದ ನಿವಾಸಿ ರಾಮಪ್ಪ(55) ಮೃತ ದುರ್ದೈವಿ. ಮನೆ ಅಂಗಳದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರಾಮಪ್ಪ ಮೃತಪಟ್ಟಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ರಾಮಪ್ಪರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.