ಕೊಪ್ಪಳ: ವಾಹನಗಳ ಬ್ಯಾಟರಿ ಕಳ್ಳತನ ಮಾಡುವ ವೇಳೆ ನಗರಸಭೆ ಸದಸ್ಯನೊಬ್ಬ ಸಿಕ್ಕಿಬಿದ್ದು, ಬಳಿಕ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ.
ಜಿಲ್ಲೆ ಗಂಗಾವತಿ ನಗರಸಭೆ ನಾಮನಿರ್ದೇಶಿತ ಸದಸ್ಯ ಬಿಚ್ಚುಗತ್ತಿ ಸಲ್ಮಾನ್ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ. ಶಾಸಕ ಇಕ್ಬಾಲ್ ಅನ್ಸಾರಿ ಬಲಗೈ ಬಂಟ ಎಂದು ಗುರುತಿಸಿಕೊಂಡಿರುವ ಸಲ್ಮಾನ್ ಕೆಲ ದಿನಗಳ ಹಿಂದೆ ಲಾರಿ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನ ಆಧರಿಸಿ ಕಳ್ಳತನದ ಆರೋಪಿ ಸಲ್ಮಾನ್ ನನ್ನು ಬಂಧಿಸಲು ಪೊಲೀಸರು ತೆರಳಿದ್ದರು.
ಈ ವೇಳೆ ಸಲ್ಮಾನ್ ಮತ್ತು ಆತನ ಬೆಂಬಲಿಗರು ಪೊಲೀಸರ ಮೇಲೆ ಸಿನಿಮೀಯ ಮಾದರಿಯಲ್ಲಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸಲ್ಮಾನ್ ರೌಡಿಶೀಟರ್ ಕೂಡ ಹೌದು.
ಪ್ರಸ್ತುತ ಘಟನೆ ಕುರಿತು ಸಲ್ಮಾನ್ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ. ಲಾರಿ ಮಾಲೀಕ ಭಾಷಸಾಬ ನೀಡಿದ ದೂರಿನ ಹಿನ್ನೆಲೆಯಲ್ಲಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಷಸಾಬ ಅವರು ಸಿಸಿ ಕ್ಯಾಮೆರಾದ ವಿಡಿಯೋಗಳನ್ನು ಮಾಧ್ಯಮಗಳಿಗೆ ನೀಡಿದ್ದಾರೆ.
https://www.youtube.com/watch?v=1yfjpJhvomg