ಬೆಂಗಳೂರು: ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ಮುಖಂಡ, ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರ್ತಾರಾ ಎಂಬ ಸುದ್ದಿಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಈಗಾಗಲೇ ಮಾಲೀಕಯ್ಯ ಗುತ್ತೆದಾರ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕಮಲ ಹಿಡಿತಾರಾ ಅಥವಾ ತೆನೆ ಹೊರೆ ಹೊರಲು ಸಿದ್ಧರಾಗ್ತಾರಾ ಎಂಬುವುದು ಇನ್ನೇರೆಡು ದಿನಗಳಲ್ಲಿ ತಿಳಿಯಲಿದೆ.
ಈಗಾಗಲೇ ಬೆಂಗಳೂರಿನಲ್ಲಿ ಮಾಲೀಕಯ್ಯ ಗುತ್ತೇದಾರ್ ಒಂದು ಬಾರಿ ಸಿಎಂ ಸಿದ್ದರಾಮಯ್ಯ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ವಿಫಲವಾಗಿದೆ ಅಂತಾ ಹೇಳಲಾಗುತ್ತಿದೆ. ಇತ್ತ ಬಿಜೆಪಿ ಯ ಮುಖಂಡರು ಜೊತೆ ಶಾಸಕರು ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರ್ಪಡೆ ಬಹುತೇಕ ಖಚಿತವಾಗಿದೆ. ಇನ್ನೆರಡು ದಿನಗಳಲ್ಲಿ ಮಾಲೀಕಯ್ಯ ಗುತ್ತೇದಾರ್ ತಮ್ಮ ನಿರ್ಧಾರವನ್ನು ಬಹಿರಂಗಗೊಳಿಸಲಿದ್ದಾರೆ. ಈಗಾಗಲೇ ಬಿಜೆಪಿ ಚುನಾವಣೆಗೆ ಸ್ಪರ್ಧಿಸುವ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಪಟ್ಟಿಯಲ್ಲಿ ಅಫಜಲ್‍ಪುರ ಮತಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನೂ ಬಿಜೆಪಿ ರಿವೀಲ್ ಮಾಡಿಲ್ಲ.
ಒಂದು ವೇಳೆ ಮಾಲೀಕಯ್ಯ ಗುತ್ತೇದಾರ ಬಿಜೆಪಿ ಸೇರ್ಪಡೆಗೊಂಡರೆ ಟಿಕೆಟ್ ಸಿಗುತ್ತಾ ಎಂಬುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ. ಈಗಾಗಲೇ ಅಫಜಲ್‍ಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಆರು ಬಾರಿ ಶಾಸಕರಾಗಿ ಮಾಲೀಕಯ್ಯ ಗುತ್ತೇದಾರ್ ಆಯ್ಕೆಗೊಂಡಿದ್ದಾರೆ.