Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಮಾತೆ ಪ್ರಮೋದಾ ದೇವಿ ಜೊತೆ ಶಾ ಮಹತ್ವದ ಚರ್ಚೆ – ಇನ್‍ಸೈಡ್ ಸ್ಟೋರಿ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜಮಾತೆ ಪ್ರಮೋದಾ ದೇವಿ ಜೊತೆ ಶಾ ಮಹತ್ವದ ಚರ್ಚೆ – ಇನ್‍ಸೈಡ್ ಸ್ಟೋರಿ ಇಲ್ಲಿದೆ

Districts

ರಾಜಮಾತೆ ಪ್ರಮೋದಾ ದೇವಿ ಜೊತೆ ಶಾ ಮಹತ್ವದ ಚರ್ಚೆ – ಇನ್‍ಸೈಡ್ ಸ್ಟೋರಿ ಇಲ್ಲಿದೆ

Public TV
Last updated: March 30, 2018 6:10 pm
Public TV
Share
1 Min Read
amith shah mysuru 5 2
SHARE

ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲ ಬಾರಿಗೆ ಮೈಸೂರು ಅರಮನೆಗೆ ಭೇಟಿ ನೀಡಿ ರಾಜ ಮನೆತನದವರ ಜೊತೆ ಮಾತುಕತೆ ನಡೆಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲೇ ಅಮಿತ್ ಶಾ ಅವರ ಮೈಸೂರು ಭೇಟಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.ಇಂದು ಮೈಸೂರಿನ ಖಾಸಗಿ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ರಾಜಮಾತೆ ಪ್ರಮೋದಾ ದೇವಿ ಹಾಗೂ ಯದುವೀರ್ ಒಡೆಯರ್ ಅವರ ಚರ್ಚೆ ನಡೆಸಿದರು. ಬಳಿಕ ಮೈಸೂರು ಅರಮನೆಯ ಗಣಪತಿ ದೇವಸ್ಥಾನ ಮುಂಭಾಗ ಅಮಿತ್ ಶಾ ಹಾಗೂ ಪ್ರಮೋದಾ ದೇವಿ ಒಡೆಯರ್ ಅವರು ಗೌಪ್ಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಯದುವೀರ್ ಒಡೆಯರ್ ಅವರನ್ನು ಬಿಟ್ಟು ಇಬ್ಬರೇ ಮಾತುಕತೆ ನಡೆಸಿದರು.

amith shah mysuru 3

ಅಮಿತ್ ಶಾ ಅವರು ತಮ್ಮ ಮಾತುಕತೆ ವೇಳೆ ಒಡೆಯರ್ ಅವರಿಗೆ ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡಬೇಕು. ಇದಕ್ಕಾಗಿ ಬಿಜೆಪಿಗೆ ಸೇರ್ಪಡೆಯಾಗಬೇಕು ಎಂದು ಮನವಿ ಮಾಡಿದ್ದಾರೆ. ಒಂದು ವೇಳೆ ರಾಜಕೀಯ ಪ್ರವೇಶಕ್ಕೆ ಒಪ್ಪಿಗೆ ಸೂಚಿಸಿದರೆ ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಟಿಕೆಟ್ ನೀಡಲಾಗುವುದು ಎಂದು ಖಚಿತ ಭರವಸೆ ನೀಡಿದರು ಎಂಬುದಾಗಿ ಮೂಲಗಳು ತಿಳಿಸಿವೆ.

amith shah mysuru 4 1

ಅಮಿತ್ ಶಾ ಅವರ ರಾಜಕೀಯ ಪ್ರವೇಶದ ಮನವಿಯನ್ನು ಪ್ರಮೋದಾ ದೇವಿ ಅವರು ನಯವಾಗಿ ತಿರಸ್ಕರಿಸಿದ್ದಾರೆ. ಈ ಕುರಿತು ಒಡೆಯರ್ ಅವರು ಸಮಾನ ಅಭಿಪ್ರಾಯ ವ್ಯಕ್ತಪಡಿಸಿದ್ದು, ರಾಜಕೀಯ ಪ್ರವೇಶದ ಕುರಿತು ಆಸಕ್ತಿ ಇದೆ. ಆದರೆ ಇದು ಸೂಕ್ತ ಸಮಯವಲ್ಲ ಎಂದು ಅಮಿತ್ ಶಾ ಅವರ ಮನವಿಯನ್ನು ನಗುತ್ತಲೇ ತಿರಸ್ಕರಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ರಾಜಕೀಯ ಎಂಟ್ರಿ ಸುದ್ದಿ ಬಗ್ಗೆ ಸ್ಪಷ್ಟನೆ ಕೊಟ್ಟ ಯದುವೀರ್ ಒಡೆಯರ್

ಭೇಟಿ ವೇಳೆ ಯದುವೀರ್ ಪುತ್ರ ಆದ್ಯವೀರ್ ನನ್ನು ಶಾ ಮುದ್ದಾಡಿದರು. ರಾಜಮನೆತನದ ಭೇಟಿ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್, ಸಂಸದ ಪ್ರತಾಪ್ ಸಿಂಹ ಉಪಸ್ಥಿತರಿದ್ದರು.

amith shah mysuru 2

amith shah mysuru

TAGGED:Amit ShahAssembly ElectionsbjpMeetmysurupoliticsPramoda deviPublic TVYaduveer Wadiyarಅಮಿತ್ ಶಾಪಬ್ಲಿಕ್ ಟಿವಿಪ್ರಮೋದಾ ದೇವಿಬಿಜೆಪಿಭೇಟಿಮೈಸೂರುಯದುವೀರ್ ಒಡೆಯರ್ರಾಜಕೀಯವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
3 seconds ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
2 minutes ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
7 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
19 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
24 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
31 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?