ಕಲಬುರಗಿ: ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಜೊತೆ ಹೊಂದಾಣಿಕೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಅಗತ್ಯವಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆಯೇ ಹೊರತು ಮಾಲೀಕಯ್ಯ ಜೊತೆ ಸೇರಲ್ಲ ಅಂತ ಅಫಜಲಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಎಂ.ವೈ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಕಲಬುರಗಿಯ ತಮ್ಮ ನಿವಾಸದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂ.ವೈ.ಪಾಟೀಲ್, ಮಾಲೀಕಯ್ಯ ಗುತ್ತೇದಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಾಲೀಕಯ್ಯ ಗುತ್ತೇದಾರ ಬಿಜೆಪಿ ಗುತ್ತಿಗೆ ಪಡೆದುಕೊಂಡಂತೆ ಮಾತನಾಡುತ್ತಿದ್ದಾರೆ. ನನಗೆ ಎಂ.ಎಲ್.ಸಿ ಕೊಡಿಸುವೆ ಎನ್ನುತ್ತಾರೆ. ಇಂತಹ ಗಂಜಿ ಕೇಂದ್ರಗಳ ಅಗತ್ಯ ನನಗೆ ಇಲ್ಲ. ಇಂದು ಅಫಜಲಪುರ ದಲ್ಲಿ ಕಾರ್ಯಕರ್ತರ ಸಭೆ ಕರೆದಿದ್ದೇನೆ. ಕಾರ್ಯಕರ್ತರ ಅಭಿಪ್ರಾಯ ಆಧರಿಸಿ ಮುಂದಿನ ಹೆಜ್ಜೆ ಇಡುತ್ತೇನೆ ಎಂದರು.
ಯಡಿಯೂರಪ್ಪ ಗೆ ಜೆಡಿಎಸ್ ಅನ್ಯಾಯ ಮಾಡಿದೆ ಎನ್ನುವ ಕಾರಣಕ್ಕೆ ನಾನು ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದೆ. ಆದ್ರೆ ಈಗ ಯಡಿಯೂರಪ್ಪರಿಂದಲೇ ಅನ್ಯಾಯವಾಗುತ್ತಿದೆ. ನನಗೆ ಬಹಳ ನೋವಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.