ವಿದ್ಯುತ್ ತಂತಿ ಸ್ಪರ್ಶಿಸಿ 10 ವರ್ಷದ ಗಂಡಾನೆ ಸಾವು

Public TV
1 Min Read
ANE 2

ಚಿಕ್ಕಮಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ 10 ವರ್ಷದ ಗಂಡಾನೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ತಣಿಗೆಬೈಲು ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

ಆನೆಯ ದೇಹದ ಮೇಲೆ ವಿದ್ಯುತ್ ತಂತಿ ಸ್ಪರ್ಶಿಸಿರುವ ಗುರುತು ಪತ್ತೆಯಾಗಿದೆ. ಹಾಗಾಗಿ ಆನೆ ವಿದ್ಯುತ್ ಶಾಕ್‍ನಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈ ಆನೆ ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಓಡಾಡುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

25 ckm elephant death av 7

ಕಳೆದ ವರ್ಷ ಕೂಡ ತಣಿಗೇಬೈಲು ವ್ಯಾಪ್ತಿಯಲ್ಲಿ ಕಾಡಾನೆ ಸಾವಿಗೀಡಾಗಿತ್ತು. ಆನೆಯ ಮರಣೋತ್ತರ ಪರೀಕ್ಷೆಯ ನಂತರ ಎರಡೂ ದಂತವನ್ನ ಹೊರತೆಗೆದಿದ್ದಾರೆ. ಸದ್ಯಕ್ಕೆ ತಣಿಗೇಬೈಲು ಅರಣ್ಯಾಧಿಕಾರಿ ಹಾಗೂ ಭದ್ರಾ ಹುಲಿ ಸಂರಕ್ಷಿತ ನಿರ್ದೇಶಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆಯಿಂದ ಜಮೀನುಗಳಿಗೆ ಅಕ್ರಮ ವಿದ್ಯುತ್ ತಂತಿ ಅಳವಡಿಸಿರುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *