ಚಿತ್ರದುರ್ಗ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಟಾರ್ ಗಳ ದಂಡೇ ಪ್ರಚಾರವನ್ನು ಮಾಡುತ್ತಿದ್ದು, ಇಂದು ನಟ ಸುದೀಪ್ ಬಳ್ಳಾರಿಯ ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ಪರ ಮೊಳಕಾಲ್ಮೂರಿನಲ್ಲಿ ಪ್ರಚಾರ ಮಾಡಿದ್ದಾರೆ.
ಚುನಾವಣಾ ಅಧಿಕಾರಿಗಳು ನಟ ಸುದೀಪ್ ರೋಡ್ ಶೋವನ್ನು ರದ್ದು ಮಾಡಿದ್ದಾರೆ. ಚುನಾವಣಾ ಅಧಿಕಾರಿಗಳ ಅನುಮತಿ ಸಿಗದ ಹಿನ್ನೆಲೆಯಲ್ಲಿ ನಟ ಸುದೀಪ್ ನ ನಾಯಕನಟ್ಟಿ ಪ್ರಚಾರ ಸಭೆಯನ್ನು ರದ್ದು ಮಾಡಿದ್ದಾರೆ. ಇದನ್ನೂ ಓದಿ: ರಸ್ತೆ ಬದಿ ತಿಂಡಿ ತಿಂದು ಮಾಲಕಿಗೆ 10 ಸಾವಿರ ರೂ. ಕೊಟ್ಟ ಸುದೀಪ್!
ಸುದೀಪ್ ನಾಯಕನಟ್ಟಿ ತಿಪ್ಪೇರುದ್ರಸ್ವಾಮಿ ದರ್ಶನ ಪಡೆದು ನಂತರ ಕೊಂಡ್ಲಹಳ್ಳಿಯಲ್ಲಿ ಪ್ರಚಾರಕ್ಕೆ ತೆರಳಬೇಕಿತ್ತು. ಆದರೆ ದೇಗುಲದ ಆವರಣದಲ್ಲಿ ಚುನಾವಣಾ ಅಧಿಕಾರಿಗಳು ಅನುಮತಿ ನೀಡದ ಕಾರಣ ನಾಯಕನಟ್ಟಿಯಲ್ಲಿ ರೋಡ್ ಶೋ ರದ್ದು ಮಾಡಿದ್ದಾರೆ. ಆದರೆ ಕಾಲೇಜು ಆವರಣದಲ್ಲಿ ಸಭೆಗೆ ಮಾತ್ರ ಅನುಮತಿ ನೀಡಿದ್ದಾರೆ.
ಚುನಾವಣಾ ಅಧಿಕಾರಿಗಳಿಂದ ಸುದೀಪ್ ವೀಕ್ಷಿಸಲು ಬೆಳಿಗ್ಗೆಯಿಂದ ಬಿಸಿಲಲ್ಲಿ ಕಾದಿದ್ದ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರಿಗೆ ನಿರಾಸೆ ಆಗಿದೆ. ದೇಗುಲದ ಆವರಣದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ತಿಪ್ಪೇಸ್ವಾಮಿ ಪ್ರಚಾರದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಸುದೀಪ್ ರೋಡ್ ಶೋಗೆ ಅನುಮತಿ ನೀಡಲಿಲ್ಲ.