ಚಿಕ್ಕಬಳ್ಳಾಪುರ: ಎಲ್‍ಪಿಜಿ ಸಿಲಿಂಡರ್ ಸ್ಫೋಟಗೊಂಡು ನಾಲ್ಕು ಮನೆಗಳಿಗೆ ಹಾನಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಎಳ್ಳುಪುರದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಗ್ರಾಮದ ಮಂಜುನಾಥ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ನಾಲ್ಕು ಮನೆಗಳು ಸೇರಿದಂತೆ ಒಂದು ಕಾರು ಸಹ ಜಖಂಗೊಂಡಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮನೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಸ್ಥಳಿಯ ಆಸ್ವತ್ರೆಗೆ ದಾಖಲು ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.