ಬೆಂಗಳೂರು: ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮನೆಗೆ ಫಾರ್ಚೂನರ್ ಕಾರ್ ಬಂದಿದೆ.
ಯಡಿಯೂರಪ್ಪ ವಿಧಾನಸಭೆ ವಿಪಕ್ಷ ನಾಯಕರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಸರ್ಕಾರ ಕಾರು ನೀಡಿದೆ. ಕೆಎ 01 ಜಿ 6309 ನೋಂದಣಿ ಸಂಖ್ಯೆಯ ಫಾರ್ಚೂನರ್ ಕಾರು ಇದಾಗಿದ್ದು, ಇಂದು ಈ ಕಾರನ್ನು ಸರ್ಕಾರ ಯಡಿಯೂರಪ್ಪ ಅವರಿಗೆ ನೀಡಿದೆ.
ಯಡಿಯೂರಪ್ಪ ಅವರಿಗೆ ನೀಡಿರುವ ಫಾರ್ಚೂನರ್ ಕಾರನ್ನು ಈ ಹಿಂದೆ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿದ್ದ ಎನ್.ಎಚ್. ಶಿವಶಂಕರ ರೆಡ್ಡಿ ಅವರು ಬಳಸುತ್ತಿದ್ದರು. ಈಗ ಯಡಿಯೂರಪ್ಪ ಅವರಿಗೆ ಸರ್ಕಾರ ನೀಡಿದೆ.
ವರುಣಾ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಪರಿಷತ್ ಚುನಾವಣೆಗೆ ಅಖಾಡಕ್ಕೆ ಇಳಿಸಲು ಮುಂದಾಗಿದ್ದು, ಪರಿಷತ್ ಚುನಾವಣೆಯಲ್ಲಿ ಪುತ್ರ ವಿಜಯೇಂದ್ರ ನನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿರುವ ಅವರು ಹೈಕಮಾಂಡ್ ಜೊತೆ ನೇರವಾಗಿ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ.