ಮಡಿಕೇರಿ: ಇಂದು ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ವ್ಯಾಪಕ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸುವ ಪ್ರಯತ್ನ ಮಾಡ್ತಿದ್ದಾರೆ.
ಇಂದು ಬೆಳಗ್ಗೆಯಿಂದಲೂ ಮಡಿಕೇರಿ ನಗರಕ್ಕೆ ಆಗಮಿಸುತ್ತಿರುವ ವಾಹನಗಳನ್ನು ಶಾಸಕ, ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಡೆಯುತ್ತಿದ್ದಾರೆ. ಶಾಸಕರು ಬಲವಂತವಾಗಿ ವಾಹನಗಳನ್ನು ತಡೆಯುತ್ತಿದ್ದರಿಂದ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ರು. ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ರು ಲೆಕ್ಕಿಸದ ಮಾಜಿ ಸ್ಪೀಕರ್ ವಾಹನಗಳನ್ನು ತಡೆಯುತ್ತಿದ್ದಾರೆ.
ಮುಖ್ಯಮಂತ್ರಿಗಳು ನುಡಿದಂತೆ ನಡೆಯಬೇಕು. ಚುನಾವಣಾ ಪೂರ್ವದಲ್ಲಿ ಹೇಳಿದಂತೆ ಸಾಲಮನ್ನಾ ಮಾಡಬೇಕು. ಜಿಲ್ಲೆಯ ಎಲ್ಲ ರೈತರು, ಸ್ಥಳೀಯರು ಸ್ಪಂದನೆ ಮಾಡಿದ್ದಾರೆ. ಆದ್ರೆ ಜಿಲ್ಲೆಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆಯೇ ಹೆಚ್ಚಾಗಿದೆ. ಪೊಲೀಸರು ಪ್ರವಾಸಿಗರ ಏಜೆಂಟ್‍ರಂತೆ ವರ್ತಿಸುತ್ತಿದ್ದಾರೆ. ಪೊಲೀಸರ ದಬ್ಬಾಳಿಕೆಗೆ ಹೆದರುವವರು ನಾವಲ್ಲ ಅಂತಾ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಹೇಳಿದ್ದಾರೆ.
ವಾಹನಗಳ ತಡೆಯಿಂದ ಪ್ರಯಾಣಿಕರು ಅನುಭವಿಸುವಂತಾಗಿದೆ. ಸ್ಥಳದಲ್ಲಿ 20ಕ್ಕೂ ಅಧಿಕ ಕಾರ್ಯಕರ್ತರು ಶಾಸಕರಿಗೆ ಸಾಥ್ ನೀಡಿದ್ದಾರೆ.