ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಬಳಿಕ ಅಧಿಕಾರ ಕಳೆದುಕೊಂಡ ಬಿಜೆಪಿಯಲ್ಲಿ ಇದೀಗ ಅಸಮಾಧಾನ ಸ್ಫೋಟವಾಗಿದೆ.
ಈಶ್ವರಪ್ಪ ಆಪ್ತನಾಗಿರುವ ಭಾನುಪ್ರಕಾಶ್ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಲು ವಿರೋಧ ವ್ಯಕ್ತವಾಗಿದೆ. ಭಾನುಪ್ರಕಾಶ್ ಅವರು ರಾಯಣ್ಣ ಬ್ರಿಗೇಡ್ ಬೆಂಬಲಕ್ಕೆ ನಿಂತಿದ್ದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ವಕ್ತಾರ ವಾಮಾನಚಾರ್ಯ, ಸುಬ್ಬ ನರಸಿಂಹ ಆಯ್ಕೆಗೆ ಒಲವು ತೋರಿದ್ದಾರೆ ಎನ್ನಲಾಗಿದೆ.
ಭಾನುಪ್ರಕಾಶ್ ಜೊತೆಗೆ ಕುರುಬ ಸಮುದಾಯದ ಅಭ್ಯರ್ಥಿ ಆಯ್ಕೆಗೆ ಪಟ್ಟು ಹಿಡಿಯಲಾಗಿದೆ. ಈ ಮೂಲಕ ಬಿಜೆಪಿ ನಾಯಕರು ಈಶ್ವರಪ್ಪ ಮಾತಿಗೆ ಮಣೆ ಹಾಕಿಲ್ಲ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಈಶ್ವರಪ್ಪ ಅವರು ಇಂದು ಸಂಜೆ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಗೂ ಗೈರು ಹಾಜರಿಯಾಗುವ ಸಾಧ್ಯತೆ ಇದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಸದ್ಯ ಭಾನುಪ್ರಕಾಶ್ ಮೇಲ್ಮನೆಗೆ ಆಯ್ಕೆಯಾಗುವುದು ಅನುಮಾನವಾಗಿದೆ.