ವಿಜಯಪುರ: ಜಿಲ್ಲೆಯ ಉಕ್ಜಲಿಯಲ್ಲಿ ವಿವಿ ಪ್ಯಾಟ್ ರಶೀದಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತಗಟ್ಟೆ ಅಧಿಕಾರಿ ರವೀಂದ್ರ ನಂದವಾಡಗಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಮತಕ್ಷೇತ್ರದ ಉಕ್ಕಲಿ ಗ್ರಾಮದಲ್ಲಿ ಮೇ 27ರಂದು ವಿವಿ ಪ್ಯಾಟ್ ರಶೀದಿ ಪತ್ತೆಯಾಗಿತ್ತು. ಈ ಸಂಬಂಧ ಪರಾಜಿತ ಜೆಡಿಎಸ್ ಅಭ್ಯರ್ಥಿ ಸೋಮನಗೌಡ ಪಾಟೀಲ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದನ್ನೂ ಓದಿ: ವಿವಿ ಪ್ಯಾಟ್ ಬಾಕ್ಸ್ ಬಳಿಕ ಪತ್ತೆ ಆಯ್ತು ವಿವಿ ಪ್ಯಾಟ್ ರಶೀದಿ
ದೂರಿನಲ್ಲಿ ಸ್ಥಳೀಯ ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ತನಿಖೆ ನಡೆಸುವಂತೆ ತಿಳಿಸಿದ್ದರು. ಉಕ್ಕಲಿ ಗ್ರಾಮದ ನ್ಯೂ ಇಂಗ್ಲಿಷ್ ಶಾಲೆಯ ಮತಗಟ್ಟೆ ಸಂಖ್ಯೆ 12ಕ್ಕೆ ಸಂಬಂಧಿಸಿದ ರಶೀದಿಯನ್ನು ವಶಕ್ಕೆ ಪಡೆದು ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದರು. ನಂತರ ಮತಗಟ್ಟೆ ಅಧಿಕಾರಿ ರವೀಂದ್ರ ನಂದವಾಡಗಿ ಅವರನ್ನು ಬಂಧಿಸಿ ಶುಕ್ರವಾರ ತಡರಾತ್ರಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಎಸ್‍ಪಿ ಪ್ರಕಾಶ ನಿಕ್ಕಂ ಪಬ್ಲಿಕ್ ಟಿವಿಗೆ ಮಾಹಿತಿ ನಿಡಿದ್ದಾರೆ. ಇದನ್ನೂ ಓದಿ: ಸ್ಟ್ರಾಂಗ್ ರೂಂನಲ್ಲಿರಬೇಕಿದ್ದ ವಿವಿಪ್ಯಾಟ್ ಬಾಕ್ಸ್ ಗಳು ರಸ್ತೆಬದಿಯ ಶೆಡ್‍ನಲ್ಲಿ ಪತ್ತೆ – ಚುನಾವಣಾ ಅಕ್ರಮ ಶಂಕೆ!
ಏನಿದು ಪ್ರಕರಣ?:
ಕಳೆದ ಕೆಲ ದಿನಗಳ ಹಿಂದೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ಖಾಲಿ ವಿವಿ ಪ್ಯಾಟ್ ಬಾಕ್ಸ್ ಪತ್ತೆಯಾದ ಪ್ರಕರಣ ಮಾಸುವ ಮುನ್ನವೇ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಮತದಾನದ ಮಾಹಿತಿ ಗುಪ್ತವಾಗಿಡುವ ವಿವಿ ಪ್ಯಾಟ್ ರಶೀದಿ ಪತ್ತೆಯಾಗಿತ್ತು. ರಾಜಕೀಯ ಪಕ್ಷ ವೊಂದಕ್ಕೆ ಮತದಾನ ಮಾಡಿದ ಸಾಕ್ಷಿಯಾಗಿ ಈ ರಶೀದಿಯನ್ನು ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಮತದಾನದ ಬಳಿಕ ವಿವಿ ಪ್ಯಾಟ್ ರಶೀದಿ ಹೊಂದಿರುವ ಬಾಕ್ಸ್ ಗಳನ್ನು ಸ್ಟ್ರಾಂಗ್ ರೂಂ ನಲ್ಲಿ ಭದ್ರಪಡಿಸಲಾಗಿರುತ್ತದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಈ ವಿವಿ ಪ್ಯಾಟ್ ರಶೀದಿ ಫೋಟೋ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ಬಸವನ ಬಾಗೇವಾಡಿಯ ಗ್ರಾಮದಲ್ಲಿ ಸಿಕ್ಕಿದ್ದು ವಿವಿಪ್ಯಾಟ್ ಖಾಲಿ ಬಾಕ್ಸ್!