ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆಯಲು ಬಿಜೆಪಿ ಸಜ್ಜು!

Public TV
1 Min Read
BJP 1

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಭಾರತೀಯ ಜನತಾ ಪಾರ್ಟಿ ಸಜ್ಜಾಗಿದೆ.

ತೃತೀಯರಂಗದ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾದ ಕರ್ನಾಟಕವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡ ಬಿಜೆಪಿ ಹೈಕಮಾಂಡ್, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರಚಂಡ ಗೆಲುವಿಗೆ ತಯಾರಿ ನಡೆಸಲು ಆರಂಭಿಸಿದೆ.

vlcsnap 2018 06 11 11h01m37s6

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ಬೈಕ್ ಜಾಥಗಳ ಮೂಲಕ ಮನವರಿಕೆ ಮಾಡಲು ಬಿಜೆಪಿ ಸಿದ್ಧವಾಗಿದೆ. ರಾಜ್ಯಾದ್ಯಂತ 5 ದಿನಗಳ ಕಾಲ ಬೃಹತ್ ಬೈಕ್ ರ‍್ಯಾಲಿಗಳ ಆಯೋಜನೆ ಮಾಡಿದ್ದು, ಜೂನ್ 15 ರಿಂದ 20 ರವರೆಗೆ ರಾಜ್ಯಾದ್ಯಂತ ಬೈಕ್ ರ‍್ಯಾಲಿ ನಡೆಸಲು ಪಕ್ಷ ತೀರ್ಮಾನಿಸಿದೆ.

ಪ್ರತಿ ವಿಧಾನಸಭಾ ಕ್ಷೇತ್ರಗಳಿಗೊಂದರಂತೆ 5 ದಿನಗಳಲ್ಲಿ ಒಟ್ಟು 224 ವಿಧಾನಸಭಾ ಕ್ಷೇತ್ರಗಳಲ್ಲಿ ಬೈಕ್ ರ‍್ಯಾಲಿ ಕೈಗೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದು, ಪ್ರತಿ ಬೈಕ್ ರ‍್ಯಾಲಿವೂ ಯಶಸ್ವಿಯಾಗಬೇಕು. ಎಲ್ಲಾ ಕಡೆ ಬೈಕ್ ರ‍್ಯಾಲಿಗೆ ಭರ್ಜರಿ ರೆಸ್ಪಾನ್ಸ್ ಸಿಗುವಂತಾಗಬೇಕು. ಈ ಕುರಿತು ಆಯಾ ಜಿಲ್ಲೆಗಳ ಸಂಸದರು, ಜಿಲ್ಲಾಧ್ಯಕ್ಷರು, ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಶಾಸಕರು, ಪದಾಧಿಕಾರಿಗಳಿಗೆ ಬಿಎಸ್‍ವೈ ಖಡಕ್ ಸೂಚನೆ ನೀಡಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *