ಓಟ್ ಕಡಿಮೆ ಬಂದಿದ್ದಕ್ಕೆ ಕುಡಿಯುವ ನೀರಿಗೆ ಬ್ರೇಕ್- ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಅಭ್ಯರ್ಥಿ ಆರೋಪ

Public TV
1 Min Read
satish astagi

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾರುತಿ ಅಷ್ಟಗಿ ಅವರು ಶಾಸಕ ಸತೀಶ್ ಜಾರಕಿಹೊಳಿಯಿಂದ ಸೇಡಿನ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿದ್ದಾರೆ.

BLG BJP

ಈ ಕುರಿತು ಅಷ್ಟಗಿ ತಮ್ಮ ಫೆಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. `ಚನಾವಣೆಯಲ್ಲಿ ಓಟ್ ಕೆಡಿಮೆ ಬಂದಿದ್ದಕ್ಕೆ ಕುಡಿಯುವ ನೀರಿಗೆ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಕೊಳವೆ ಬಾವಿಯ ವಿದ್ಯುತ್ ಸಂಪರ್ಕವನ್ನು ಕೂಡ ಕಟ್ ಮಾಡಿದ್ದಾರೆ ಅಂತ ಹೇಳಿದ್ದಾರೆ.

BLG BJP 1

ಇದರಿಂದ ಮನಗುತ್ತಿ, ಹಂದಿಗನೂರು ಗ್ರಾಮದ ಜನರಿಗೆ ಕುಡಿಯುವ ನೀರಿಗೆ ತೊಂದರೆ ಆಗುತ್ತಿದ್ದು. ಕಳೆದ 15 ದಿನಗಳಿಂದ ಕುಡಿಯುವ ನೀರಿಲ್ಲದೆ ಬೆಳಗಾವಿ ಜೆಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಕ್ಷೇತ್ರದ ಜನರು ಪರಿತಪಿಸುತ್ತಿದ್ದಾರೆಂದು ಈ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *