ಕಾರವಾರ: ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಜಿಲ್ಲೆಯ ಜೋಯಿಡಾದ ಪಾಂಡರಿನದಿ ಅಪಾಯ ಮಟ್ಟಕ್ಕಿಂತಲೂ ಹೆಚ್ಚಾಗಿ ಹರಿಯುತ್ತಿದ್ದು ಇಲ್ಲಿನ ಚಾಂದೇವಾಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ನದಿಯ ನೀರಿನಿಂದ ಮುಳುಗಡೆಯಾಗಿದೆ.
ಸಿದ್ದಾಪುರ, ಶಿರಸಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತಿದ್ದು ಬನವಾಸಿಯಲ್ಲಿ ಹರಿಯುತ್ತಿರುವ ವರದಾನದಿ ತುಂಬಿ ಅಪಾಯದಮಟ್ಟದಲ್ಲಿ ಹರಿಯುತ್ತಿದೆ. ಸಿದ್ದಾಪುರದ 250 ಎಕರೆಗೂ ಹೆಚ್ಚು ಕೃಷಿ ಭೂಮಿ ಜಲಾವೃತವಾಗಿದ್ದು ಪ್ರವಾಹದ ಭೀತಿ ಎದುರಾಗಿದೆ. ಇತ್ತ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಅಲ್ಪಮಟ್ಟಿಗೆ ಕಮ್ಮಿಯಾಗಿದ್ದರೂ ಸಮುದ್ರದಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಅಲೆಗಳ ಅಬ್ಬರ ಹೆಚ್ಚಾಗಿ ಸಮುದ್ರಕೊರೆತ ಕೂಡ ಪ್ರಾರಂಭವಾಗಿದೆ.