ಬೆಂಗಳೂರು: ಈ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದುಕೊಂಡಿದ್ದ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿಯವರು ಸನ್ಮಾನ ಮಾಡಿ ಗೌರವಿಸಿ ಪುರಸ್ಕರಿಸಿದರು.
ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಥಾಮಸ್ ಮೆಮೋರಿಯಲ್ ಆಂಗ್ಲ ಶಾಲೆಯ ವಿದ್ಯಾರ್ಥಿ ಶ್ರೀನಿವಾಸ್ 624 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನಗಳಿಸಿದ್ದನು. ಈ ಮೂಲಕ ಶಾಲೆಯ ಕೀರ್ತಿಯನ್ನು ರಾಜ್ಯಮಟ್ಟಕ್ಕೆ ತಲುಪಿಸಿದ ವಿದ್ಯಾರ್ಥಿಗೆ ಸನ್ಮಾನ ಮಾಡಿದ್ದಾರೆ.
ಅಷ್ಟೇ ಅಲ್ಲದೇ ಉಡುಗೊರೆಯಾಗಿ ಲ್ಯಾಪ್‍ಟಾಪ್ ನೀಡಿ ಗೌರವದಿಂದ ಪುರಸ್ಕರಿಸಿದ್ದಾರೆ. ಬಡ ಕುಟುಂಬದಲ್ಲಿ ಜನಿಸಿದ ಶ್ರೀನಿವಾಸ್ ಸಾಧನೆಯನ್ನು ಆಡಳಿತ ಮಂಡಳಿ ಪ್ರಶಂಸಿತು.