ಭಾರೀ ಮಳೆಗೆ ಕೊಳಚೆ ನೀರಿನಲ್ಲಿ ಕೊಚ್ಚಿ ಹೋದ ಕಾರು-ವಿಡಿಯೋ ನೋಡಿ

Public TV
1 Min Read
CAR MADYA PRADESH

ಭೋಪಾಲ್: ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾದ ಕಾರಣ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ವಾಲಿಯರ್ ನಗರದಲ್ಲಿ ಮಳೆ ನೀರಿಗೆ ಕಾರು ಸೇರಿದಂತೆ ವಿವಿಧ ವಾಹನಗಳು ಕೊಳಚೆ ನೀರಿನಲ್ಲಿ ಕೊಚ್ಚಿ ಹೋಗಿವೆ.

ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ಗ್ವಾಲಿಯಾರ್ ನ ನಗರದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರು, ಟೆಂಪೋ, ಸೇರಿದಂತೆ ವಿವಿಧ ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ವಾಹನಗಳು ಕೊಚ್ಚಿ ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನೀರಿನಲ್ಲಿ ಕೊಚ್ಚಿ ಹೋದ ವಾಹನಗಳಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಪ್ರಾಣಹಾನಿಯಾಗಿಲ್ಲ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಮಧ್ಯಪ್ರದೇಶದ ಪಶ್ಚಿಮ ಜಿಲ್ಲೆಗಳು ಅಲ್ಲದೇ ಒಡಿಸ್ಸಾ, ವಿದರ್ಭ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸೂಚನೆ ನೀಡಲಾಗಿದೆ. ಉಳಿದಂತೆ ಆಗ್ರಾ, ಗ್ವಾಲಿಯರ್, ಅಲಹಾಬಾದ್ ಪ್ರದೇಶಗಳಲ್ಲಿಯೂ ಮನ್ಸೂನ್ ಅಬ್ಬರ ಜೋರಾಗಿದೆ.

Share This Article
Leave a Comment

Leave a Reply

Your email address will not be published. Required fields are marked *