Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಗುಡ್‍ನ್ಯೂಸ್, ಆತಂಕದಲ್ಲಿ ತಮಿಳುನಾಡು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಗುಡ್‍ನ್ಯೂಸ್, ಆತಂಕದಲ್ಲಿ ತಮಿಳುನಾಡು!

Bengaluru City

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಗುಡ್‍ನ್ಯೂಸ್, ಆತಂಕದಲ್ಲಿ ತಮಿಳುನಾಡು!

Public TV
Last updated: July 25, 2018 3:22 pm
Public TV
Share
3 Min Read
KRS
SHARE

ಬೆಂಗಳೂರು: ಭಾರೀ ಮಳೆಯಾಗಿ ಡ್ಯಾಂಗಳು ಭರ್ತಿಯಾದ ಕಾರಣ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರಕ್ಕೂ, ಅಧಿಕಾರಿಗಳ ಚಿಂತೆ ಕಡಿಮೆಯಾಗಿದೆ.

ಪ್ರತಿನಿತ್ಯ 75 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಯುತ್ತಿದ್ದು, ಮುಂದಿನ ನಾಲ್ಕು ದಿನದಲ್ಲೇ ಸೆಪ್ಟೆಂಬರ್ ತಿಂಗಳ ನೀರು ತಮಿಳುನಾಡಿಗೆ ಹರಿಯುತ್ತೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

ಎಷ್ಟು ನೀರು ಹರಿದಿದೆ?
ಕಾವೇರಿ ಕೊಳ್ಳದ ಎಲ್ಲಾ ಜಲಾಶಯಗಳು ಭರ್ತಿಯಾದ ಪರಿಣಾಮ ಜುಲೈ ತಿಂಗಳಿನಲ್ಲೇ ದಾಖಲೆ ಪ್ರಮಾಣದ 101 ಟಿಎಂಸಿ ನೀರು ತಮಿಳುನಾಡಿಗೆ ಹರಿದಿದೆ. ಜೂನ್, ಜುಲೈ ತಿಂಗಳ 41 ಟಿಎಂಸಿ ನೀರನ್ನು ಜುಲೈ ನಲ್ಲೇ ಹರಿಸಲಾಗಿದೆ. ಜೊತೆಗೆ ಆಗಸ್ಟ್ ನಲ್ಲಿ ಬಿಡಬೇಕಾಗಿದ್ದ 46 ಟಿಎಂಸಿ ನೀರನ್ನ ಇದೇ ತಿಂಗಳಲ್ಲಿ ಬಿಡಲಾಗಿದೆ. ಅಷ್ಟೇ ಅಲ್ಲದೇ ಸೆಪ್ಟೆಂಬರ್ ತಿಂಗಳಲ್ಲಿ ಬಿಡಬೇಕಾಗಿದ್ದ 36 ಟಿಎಂಸಿ ಪೈಕಿ ಈಗಾಗಲೇ 16 ಟಿಎಂಸಿ ನೀರು ತಮಿಳುನಾಡಿಗೆ ಹರಿದಿದ್ದು, ಬಾಕಿ 20 ಟಿಎಂಸಿ ನೀರು ಈ ತಿಂಗಳಿನಲ್ಲೇ ಹರಿಯಲಿದೆ.

ಒಂದೇ ಬಾರಿಗೆ ಕಾವೇರಿ ನೀರು ಹರಿವಿನಿಂದ ತಮಿಳುನಾಡು ಸರ್ಕಾರ ಕಂಗಾಲು ಆಗಿದ್ದು, 120 ಅಡಿಯ ಮೆಟ್ಟೂರು ಡ್ಯಾಮ್ 5 ವರ್ಷಗಳ ಬಳಿಕ ಭರ್ತಿಯಾಗಿದೆ. ಇತಿಹಾಸದಲ್ಲಿ 39ನೇ ಬಾರಿ ಡ್ಯಾಂ ಭರ್ತಿಯಾಗಿದ್ದು 50 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

kabini dam01

ಯಾವ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ಟಿಎಂಸಿ ನೀರು?
ನ್ಯಾ. ಎನ್.ಪಿ.ಸಿಂಗ್, ನ್ಯಾ. ಸುಧೀರ್ ನಾರಿಯನ್, ನ್ಯಾ. ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪು ನೀಡಿತ್ತು. ಈ ತೀರ್ಪು ಪ್ರಕಾರ ಜೂನ್ ನಲ್ಲಿ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಟಿಎಂಸಿ ಸೇರಿ ಒಟ್ಟು 192 ಟಿಎಂಸಿ ನೀರನ್ನು ಕನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕಿತ್ತು. ಈ ಐತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಎಎಂ ಖಾನ್ವೀಲ್ಕರ್ ಮತ್ತು ಅಮಿತಾವ್ ರಾಯ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ಈ ವರ್ಷದ ಫೆಬ್ರವರಿ 16 ರಂದು ಐತೀರ್ಪನ್ನು ಸ್ವಲ್ಪ ಬದಲಾಯಿಸಿ 177.75 ಟಿಎಂಸಿ ನೀರನ್ನು ಕರ್ನಾಟಕ ಪ್ರತಿವರ್ಷ ತಮಿಳುನಾಡಿಗೆ ಬಿಡಬೇಕೆಂದು ಆದೇಶಿಸಿತ್ತು. ಅಷ್ಟೇ ಅಲ್ಲದೇ ಯಾವ ತಿಂಗಳಿನಲ್ಲಿ ಎಷ್ಟು ನೀರು ಬಿಡಬೇಕು ಎನ್ನುವುದನ್ನು ಕೇಂದ್ರ ನೇಮಿಸುವ ಸಂಸ್ಥೆ ನಿರ್ಧರಿಸಬೇಕು ಎಂದು ಹೇಳಿತ್ತು.

ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Second ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

ತಮಿಳುನಾಡಿಗೆ ಕರ್ನಾಟಕದಿಂದ ನೀರು ಹರಿದಿದೆ ಎಂದು ಪತ್ತೆ ಮಾಡೋದು ಹೇಗೆ?
ತಮಿಳುನಾಡಿನ ಭಾಗದಲ್ಲಿರುವ ಬಿಳಿಗುಂಡ್ಲುವಿನಲ್ಲಿ ಎಷ್ಟು ಪ್ರಮಾಣದ ನೀರು ಹರಿದಿದೆ ಎಂದು ಪತ್ತೆ ಮಾಡಲು ಕೇಂದ್ರ ಜಲ ಆಯೋಗದ ಅಧಿಕಾರಿಗಳು ವರ್ಷವಿಡಿ ನೀರಿನ ಲೆಕ್ಕಾಚಾರ ಹಾಕುತ್ತಾರೆ. ಪ್ರತಿದಿನ ಬೆಳಗ್ಗೆ 8ರಿಂದ 10ರವರೆಗೆ ಎರಡು ಗಂಟೆಗಳ ಕಾಲ 160 ಮೀಟರ್ ಪ್ರದೇಶದ 15 ನಿರ್ದಿಷ್ಟ ಸ್ಥಳಗಳಲ್ಲಿ ಈ ಪರೀಕ್ಷೆ ನಡೆಯುತ್ತದೆ. 7 ಮಂದಿ ಸಿಬ್ಬಂದಿ ದೋಣಿ ಮೂಲಕ ಒಂದು ದಂಡೆಯಿಂದ ಮತ್ತೂಂದು ದಂಡೆಗೆ ಸಾಗಿ ತಮ್ಮ ಜೊತೆ ಇರುವ ಉಪಕರಣವನ್ನು ನೀರಿಗೆ ಬಿಡುತ್ತಾರೆ. ಈ ಮೂಲಕ ಪ್ರತಿ ಸೆಕೆಂಡ್‍ಗೆ ಎಷ್ಟು ನೀರು ಕರ್ನಾಟಕದಿಂದ ತಮಿಳುನಾಡಿಗೆ ಹೋಗುತ್ತಿದೆ ಎಂಬುದನ್ನು ಪತ್ತೆ ಮಾಡುತ್ತಾರೆ. ಈ ಸಿಬ್ಬಂದಿಯನ್ನು ಕರ್ನಾಟಕ, ತಮಿಳುನಾಡಿನ ಅಧಿಕಾರಿಗಳು ನೇರವಾಗಿ ಸಂಪರ್ಕಿಸುವಂತಿಲ್ಲ. ರಾಜ್ಯ ಸರ್ಕಾರಗಳು ಅಥವಾ ನ್ಯಾಯಾಲಯಗಳು ಕೇಳಿದರೆ ಮಾತ್ರ ಮಾಹಿತಿಯನ್ನು ನೀಡಲಾಗುತ್ತದೆ.

kabini dam 1 1

TAGGED:Kabinikarnatakakrsraintamilnaduwaterಕರ್ನಾಟಕಕಾವೇರಿತಮಿಳುನಾಡುಬಿಳಿಗುಂಡ್ಲುಮಳೆಮೆಟ್ಟೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
42 seconds ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
33 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
1 hour ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?