ಬೆಂಗಳೂರು: ಶಾಲಾ ವಾಹನವೊಂದು ಬಿಎಂಟಿಸಿ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಇಂದು ಬೆಂಗಳೂರಿನ ಯಲಹಂಕದ ಶೇಷಾದ್ರಿಪುರಂ ಕಾಲೇಜು ಬಳಿ ನಡೆದಿದೆ.
ಆವಲಹಳ್ಳಿಯ ಪ್ರೆಸಿಡೆನ್ಸಿ ಶಾಲೆಯ ಬಸ್, ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿಗೆ ಗುದ್ದಿದೆ. ಘಟನೆಯಿಂದಾಗಿ ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಘಟನೆ ಸಂಭವಿಸಿದೆ ವೇಳೆ ಬಸ್ಸಿನಲ್ಲಿ ಒಂದಿಬ್ಬರು ವಿದ್ಯಾರ್ಥಿಗಳು ಮಾತ್ರ ಇದ್ದು, ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಲೆಂದು ಬಸ್ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಘಟನೆಯಿಂದ ಬಸ್ ಚಾಲಕ ಮಂಜುನಾಥ್ ಕಾಲು ಮುರಿತಕ್ಕೊಳಗಾಗಿದ್ದು, ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳು ಚಾಲಕನನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ಳಂಬೆಳಗ್ಗೆ ಕುಡಿದು ಶಾಲಾ ವಾಹನ ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಈ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.