ಬಾಗಲಕೋಟೆ: ಚಾಲಕನಿಗೆ ತಲೆಸುತ್ತು ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಕೆಎಸ್‍ಆರ್ ಟಿಸಿ ಬಸ್ ಪಲ್ಟಿ ಆದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಟಕನಕೇರಿ ಕ್ರಾಸ್‍ನಲ್ಲಿ ನಡೆದಿದೆ.
ಕೆಎಸ್‍ಆರ್ ಟಿಸಿ ಬಸ್ ಗೋವಾ ರಾಜ್ಯದ ವಾಸ್ಕೋದಿಂದ ಬಾದಾಮಿಗೆ ಬರುತ್ತಿದ್ದಾಗ ಚಾಲಕನಿಗೆ ತಲೆ ಸುತ್ತು ಬಂದಿದೆ. ಪರಿಣಾಮ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.
ಸದ್ಯ ಗಾಯಾಳುಗಳು ಬಾದಾಮಿ ಪಟ್ಟಣದ ನಿಲುಗಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಾದಾಮಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.