ಬೆಂಗಳೂರು: ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಯುವಕನಿಗೆ ಧರ್ಮದೇಟು ಬಿದ್ದ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ.
ಮೈಸೂರು ಮೂಲದ ಸಿದ್ದು ಗೌಡ ಧರ್ಮದೇಟು ತಿಂದ ಯುವಕ. ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಸಿದ್ದು, ಫೇಕ್ ಐಡಿ ಕ್ರಿಯೇಟ್ ಮಾಡಿ ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದನು. ಕಳೆದ ಆರು ತಿಂಗಳಿಂದ ನಿರಂತರವಾಗಿ ಅಶ್ಲೀಲವಾಗಿ ಮೆಸೇಜ್ ಮಾಡುತ್ತಿದ್ದನು.
ಇಂದು ಬಸವೇಶ್ವರನಗರಕ್ಕೆ ಯುವಕನನ್ನು ಕರೆಸಿ ಜನರು ಧರ್ಮದೇಟು ನೀಡಿದ್ದಾರೆ. ಸದ್ಯ ಕರ್ನಾಟಕ ನವ ನಿರ್ಮಾಣ ವೇದಿಕೆಯ ಕಾರ್ಯಕರ್ತರು ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರದ ಎಲ್‍ಐಸಿ ಕಾಲೋನಿಯ ಜಾವೇದ್ ಎಂಬಾತ ಪ್ರತಿ ದಿನ ಬೆಳಗ್ಗೆ ದಾರಿಯಲ್ಲಿ ಹೋಗುವ ಮಹಿಳೆಯರಿಗೆ ಚುಡಾಯಿಸುತ್ತಿದ್ದನು. ಸೀಟಿ ಹೊಡೆದು ಕಣ್ಸನ್ನೆ ಮಾಡುತ್ತಿದ್ದನು. ಕೆಲವರ ಬಳಿ ಫೋನ್ ನಂಬರ್ ಕೂಡ ಕೇಳುತ್ತಿದ್ದ. ಕೊನೆಗೆ ಜಾವೇದ್ ಕಿರುಕುಳದಿಂದ ಬೇಸತ್ತ ಮಹಿಳೆಯರು ಗುರುವಾರ ಆತನನ್ನು ನಗರದ ಮಧ್ಯೆ ಕಂಬಕ್ಕೆ ಕಟ್ಟಿ ಥಳಿಸಿ, ಕೊನೆಗೆ ಪೊಲೀಸರ ವಶಕ್ಕೆ ನೀಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews