ತುಮಕೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಸ್ ಮೈತ್ರಿ ಮಾಡಿಕೊಂಡರೆ ಮಾಡಿಕೊಳ್ಳಲಿ ಇಲ್ಲವೇ ಬಟ್ಟೆ ಬಿಚ್ಚಿ ಕುಣಿಯಲಿ, ನಮ್ಮ ಕೆಲಸ ನಾವು ಮಾಡಿಕೊಂಡು ಹೋಗುತ್ತೇವೆ ಎಂದು ಮಾಜಿ ಸಚಿವ ವಿ ಸೋಮಣ್ಣ ವ್ಯಂಗ್ಯವಾಡಿದ್ದಾರೆ.
ಇಂದು ತುಮಕೂರು ಸಿದ್ದಗಂಗಾ ಮಠ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮುಖ್ಯ ಮಂತ್ರಿಯಾಗಿ ಕುಮಾರಸ್ವಾಮಿ ಸಂಕಷ್ಟ ಪರಿಸ್ಥಿತಿಯಲ್ಲಿ ಇದ್ದಾರೆ. ಸಿಎಂ ಆಗಿ ಅವರು ತಮ್ಮ ಕೆಲಸ ತಾವು ಮಾಡುತ್ತಿದ್ದಾರೆ. ಆದರೆ 37 ಶಾಸಕರೊಂದಿಗೆ ಅವರೊಂದಿಗೆ ಸಂಕಷ್ಟ ಅನುಭವಿಸುತ್ತಿದ್ದು, ಮತ್ತೊಬ್ಬ ಶಾಸಕನನ್ನು ಕರೆತರುವ ಶಕ್ತಿ ಇಲ್ಲ. ಅದ್ದರಿಂದ ಅವರು ಎರವಲು ವ್ಯವಸ್ಥೆಯಲ್ಲಿ ಮುಖ್ಯಮಂತ್ರಿಯಾಗಿ ಜನರಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಅವರು ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿ ಅಥವಾ ಬಟ್ಟೆ ಬಿಚ್ಚಿ ಬೇಕಾದರು ಕುಣಿಯಲಿ ನಮಗೇ ಸಂಬಂಧವಿಲ್ಲ ಎಂದರು.
ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಿ ಜನರ ಮುಂದೇ ಹೋಗುತ್ತೇವೆ. ಆದರೆ ಜನರು ಯಾರು ಗೆಲ್ಲ ಬೇಕು ಎಂದು ತೀರ್ಮಾನಿಸುತ್ತಾರೆ. ಬಿಜೆಪಿ ಏಕಾಂಗಿಯಾಗಿ ಹೋರಾಟ ಮಾಡಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews