ಮಂಡ್ಯ: ಕೆಆರ್‍ಎಸ್ ಅಣೆಕಟ್ಟೆಯಿಂದ ಒಂದು ಲಕ್ಷದ 20 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುತ್ತಿರುವುದರಿಂದ ಪುರಾಣ ಪ್ರಸಿದ್ಧ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯದ ಬಳಿ ಭಕ್ತರು ಕಾವೇರಿ ನದಿಗಿಳಿದು ಸ್ನಾನ ಮಾಡದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ನಿಮಿಷಾಂಭ ದೇವಾಲಯ ಕಾವೇರಿ ನದಿಯ ಪಕ್ಕದಲ್ಲೇ ಇದೆ. ಹೀಗಾಗಿ ದೇವಾಲಯಕ್ಕೆ ಬರುವವರು ಸಾಮಾನ್ಯವಾಗಿ ಕಾವೇರಿ ನದಿಯಲ್ಲಿ ಮಿಂದು ದೇವರ ದರ್ಶನ ಮಾಡುತ್ತಾರೆ. ಆದರೆ ಕೆಆರ್‍ಎಸ್ ಅಣೆಕಟ್ಟೆಯಿಂದ ಒಂದು ಲಕ್ಷ ಇಪ್ಪತ್ತು ಸಾವಿರ ಕ್ಯೂಸೆಕ್ ನೀರು ಹರಿಯ ಬಿಡುತ್ತಿರುವುದರಿಂದ ನಿಮಿಷಾಂಭ ದೇವಾಲಯದ ಬಳಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.
ನದಿ ದಡದಲ್ಲಿದ್ದ ಅಂಗಡಿಗಳು, ಬಟ್ಟೆ ಬದಲಿಸುವ ಸ್ಥಳ ಜಲಾವೃತವಾಗಿದೆ. ಹೀಗಾಗಿ ನದಿಯ ಬಳಿ ಬ್ಯಾರಿಕೇಡ್ ಹಾಕಿ ಭಕ್ತಾದಿಗಳು ನೀರಿಗಿಳಿಯದಂತೆ ಪೊಲೀಸರು ಎಚ್ಚರ ವಹಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv