Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೋದಿ ಯಶಸ್ಸಿನ ಹಿಂದಿನ ನಾಯಕ ವಾಜಪೇಯಿ!

Public TV
Last updated: August 17, 2018 9:30 am
Public TV
Share
2 Min Read
MODI ATAL
SHARE

ಬೆಂಗಳೂರು: ಬಿಜೆಪಿ ಇಂದು ಆಡಳಿರೂಢ ಪಕ್ಷವಾಗಿದೆ. ಸದ್ಯಕ್ಕೆ ಬಿಜೆಪಿ ಎಂದರೆ ಮೋದಿ ಎನ್ನುವಂತಾಗಿದೆ. ಆದರೆ ಕೆಲ ವರ್ಷಗಳ ಹಿಂದೆ “ಅಬ್ ಕೀ ಬಾರ್ ಅಟಲ್ ಸರ್ಕಾರ್” ಎಂದೇ ಕರೆಯಲಾಗುತ್ತಿತ್ತು. ಎಂತಹ ಸಂದರ್ಭದಲ್ಲೂ ಎದೆಗುಂದದ ಅಟಲ್ ಅವರ ಧೈರ್ಯ, ಪ್ರೋಖ್ರಾನ್ ಅಣು ಪರೀಕ್ಷೆಯ ಸಂದರ್ಭದಲ್ಲೇ ಆಗಲಿ, ಕಾರ್ಗಿಲ್ ಯುದ್ಧದ ಸಮಯದಲ್ಲೇ ಆಗಲಿ ಅವರು ತೋರಿದ ದಿಟ್ಟತನ ಅವರೊಳಗಿದ್ದ ಪ್ರಖರ ರಾಜಕಾರಣಿಯ ಪರಿಚಯವನ್ನು ಮಾಡಿಕೊಟ್ಟಿತ್ತು. ಇಂತಹ ವಾಜಪೇಯಿಯವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದು ಮಾತ್ರವಲ್ಲ, ತಮ್ಮಂತೆ ಬಿಜೆಪಿ ಪಕ್ಷಕ್ಕೆ ನೇತಾರರಾಗುವಂತಹ ಸಮರ್ಥ ಶಿಷ್ಯರನ್ನ ತಯಾರು ಮಾಡಿದರು. ಇವತ್ತು ಮೋದಿ ಭಾರತದ ಯಶಸ್ವಿ ಪ್ರಧಾನಿಯಾಗಿದ್ದಾರೆ ಅಂದರೆ ಅದರ ಹಿಂದಿರುವ ಶಕ್ತಿ ಅಡ್ವಾಣಿ ಮತ್ತು ವಾಜಪೇಯಿ ಮಾತ್ರ.

vlcsnap 2018 08 17 09h25m43s3
ವಾಜಪೇಯಿ ಎಂತಹ ಸಂದರ್ಭವನ್ನು ಹೇಗೆ ಚಾಕಚಕ್ಯತೆಯಿಂದ ನಿಭಾಯಿಸುತ್ತಿದ್ದರು ಎನ್ನುವುದಕ್ಕೆ ಒಂದು ಸಣ್ಣ ನಿದರ್ಶನವೆಂದರೆ, ಗೋಧ್ರಾ ಹತ್ಯಾಕಾಂಡದ ಸಮಯದಲ್ಲಿ ಉದ್ಭವಿಸಿದ್ದ ಕ್ಷೋಭೆಯನ್ನು ಸಂಭಾಳಿಸಿದ ರೀತಿ. 2002 ಫೆಬ್ರವರಿ 27. ಅಂದು ಗುಜರಾತಿನ ಗೋಧ್ರಾ ರೈಲು ನಿಲ್ದಾಣದಲ್ಲಿ ಸಬರಮತಿ ರೈಲಿಗೆ ಬೆಂಕಿ ಹಚ್ಚಲಾಗಿತ್ತು. ಕೋಮುದಳ್ಳುರಿಯಲ್ಲಿ ನೊಂದು ಬೆಂದವರು ಸಾವಿರಾರು ಜನ. ಪ್ರಾಣ ಕಳೆದುಕೊಂಡವರು ನೂರಾರು ಮಂದಿ. ಗುಜರಾತ್ ರಾಜ್ಯದಲ್ಲಿ ನಡೆದ ಒಂದು ಹತ್ಯಾಕಾಂಡ ಭಾರತದ ಉದ್ದಗಲಕ್ಕೂ ಕಾವನ್ನು ಹರಡಿತ್ತು. ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ನರಮೇಧವನ್ನೇ ಮಾಡಿಬಿಟ್ಟರು.

vlcsnap 2018 08 17 09h26m14s64
ಭಾವೈಕ್ಯತೆಗೆ ಧಕ್ಕೆ ತಂದು ಬಿಟ್ಟರು ಎಂದು ಆರೋಪಿಸಲಾಯ್ತು. ಇದರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ವಾಜಪೇಯಿ ಸರ್ಕಾರ ಭಾರೀ ಮುಖಭಂಗವನ್ನು ಅನುಭವಿಸಬೇಕಾಗಿ ಬಂತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪರ-ವಿರೋಧ ಚರ್ಚೆಗಳು ಹಲವು ದಿನಗಳ ಮಟ್ಟಿಗೆ ಭಾರೀ ಸಂಚಲನವನ್ನೇ ಉಂಟು ಮಾಡಿದವು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೋ ಬೇಡವೋ ಎನ್ನುವ ಜಿಜ್ಞಾಸೆ ತೀವ್ರವಾಗಿದ್ದ ಸಮಯದಲ್ಲಿಯೇ ಈ ಘಟನೆ ನಡೆದದ್ದು, ಆತಂಕಕ್ಕೂ ಕಾರಣವಾಗಿತ್ತು. ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೊಗೆಯಬೇಕು ಎನ್ನುವ ಒತ್ತಡ ಹೆಚ್ಚಾಗುತ್ತೆ. ಆಗ ವಾಜಪೇಯಿ ಹೇಳಿದ್ದು ಒಂದೇ ಮಾತು.

vlcsnap 2018 08 17 09h25m19s18
“ಗೋಧ್ರಾ ಹತ್ಯಾಕಾಂಡವನ್ನು ನಾನು ಪ್ರಬಲವಾಗಿ ಖಂಡಿಸುತ್ತೇನೆ. ರಾಜನಾದವನು ಪ್ರಜೆಗಳನ್ನು ಸಮಾನವಾಗಿ ಕಾಣಬೇಕೇ ಹೊರತು ಜಾತಿ-ಧರ್ಮಗಳ ಆಧಾರದ ಮೇಲೆ ವರ್ಗೀಕರಣ ಮಾಡುವುದು ಸರಿಯಲ್ಲ. ಮೋದಿ ಅವರೇ, ಮೊದಲು ರಾಜಧರ್ಮ ಪಾಲನೆ ಮಾಡಿ. ಅದು ನಿಮ್ಮ ಕರ್ತವ್ಯ ಕೂಡ.” ಹೀಗೆ ಹೇಳಿ ಮುಖ್ಯಮಂತ್ರಿ ಹುದ್ದೆ ತ್ಯಜಿಸಬೇಕಿದ್ದ ನರೇಂದ್ರ ಮೋದಿ ಅವರನ್ನು ಪರೋಕ್ಷವಾಗಿ ರಕ್ಷಿಸಿದ್ದರು. ಅಂದು ಅಟಲ್ ಬಿಹಾರಿ ವಾಜಪೇಯಿ ನಡೆದುಕೊಂಡ ರೀತಿ ನಿಜಕ್ಕೂ ಶ್ಲಾಘನೀಯ.

vlcsnap 2018 08 17 09h26m02s189
ಮೋದಿಯಂತಹ ನಾಯಕ ಮಾತ್ರವಲ್ಲ, ಸುಷ್ಮಾ ಸ್ವರಾಜ್, ರಾಜನಾಥ್ ಸಿಂಗ್, ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹೀಗೆ ರಾಷ್ಟ್ರ ರಾಜಕೀಯದಿಂದ ಪ್ರಾದೇಶಿಕ ಮಟ್ಟದವರೆಗೂ ಹಲವು ನವ ನಾಯಕರ ಹುಟ್ಟಿಗೆ ಕಾರಣರಾದರು ವಾಜಪೇಯಿ. ಆ ಮೂಲಕ ಸಾವಿರಾರು ಕಾರ್ಯಕರ್ತರಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸ್ಫೂರ್ತಿಯಾಗಿದ್ದ ವಾಜಪೇಯಿ ಇಂದಿಗೂ ಎಂದೆಂದಿಗೂ ಅಜರಾಮರ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Atal Bihari Vajpayeebengaluruformer pmmodiPMPublic TVಅಜಾತ ಶತ್ರುಅಟಲ್ ಬಿಹಾರಿ ವಾಜಪೇಯಿನರೇಂದ್ರ ಮೋದಿಪಬ್ಲಿಕ್ ಟಿವಿಪ್ರಧಾನಿಬೆಂಗಳೂರುಮಾಜಿ ಪ್ರಧಾನಿ
Share This Article
Facebook Whatsapp Whatsapp Telegram

Cinema news

Actress Amala
ನಾಗಚೈತನ್ಯ ಬಗ್ಗೆ ಮಲತಾಯಿ ನಟಿ ಅಮಲಾ ಮಾತು
Cinema Latest South cinema Top Stories
balaramana dinagalu
ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ಬಲರಾಮನ ದಿನಗಳು
Cinema Latest South cinema Top Stories
ashwini gowda
ʻನನ್ ತಲೇಲಿ ಬುದ್ಧಿ ಇಲ್ಲ’ ಹೇಳಲು ಅಶ್ವಿನಿ ಒಪ್ಪಲ್ಲ!
Cinema Latest TV Shows
Bigg Boss
ಗಿಲ್ಲಿ ಜೊತೆ ಕಿರಿಕ್ ಮಾಡ್ಕೊಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳು
Cinema Latest Sandalwood Top Stories

You Might Also Like

01 4
Big Bulletin

ಬಿಗ್‌ ಬುಲೆಟಿನ್‌ 26 November 2025 ಭಾಗ-1

Public TV
By Public TV
1 hour ago
02 5
Big Bulletin

ಬಿಗ್‌ ಬುಲೆಟಿನ್‌ 26 November 2025 ಭಾಗ-2

Public TV
By Public TV
1 hour ago
03 4
Big Bulletin

ಬಿಗ್‌ ಬುಲೆಟಿನ್‌ 26 November 2025 ಭಾಗ-3

Public TV
By Public TV
1 hour ago
Sri Niranjanananda Puri Swamiji Sri Kanaka Guru Peeta Kaginele
Districts

ಮಠಾಧೀಶರು ಹೇಳಿದ ತಕ್ಷಣ ಸಿಎಂ ಆಗಲು ಅವಕಾಶ ಇದ್ಯಾ – ಕಾಗಿನೆಲೆ ಶ್ರೀ ಪ್ರಶ್ನೆ

Public TV
By Public TV
1 hour ago
ED Raids
Bengaluru City

ಸಚಿವರ ಆಪ್ತರ ರಿಯಲ್‌ ಎಸ್ಟೇಟ್‌ ಬಿಲ್ಡರ್‌ ಮೇಲೆ ಇಡಿ ದಾಳಿ

Public TV
By Public TV
2 hours ago
Someshwar Temple
Bengaluru City

ಡಿವೋರ್ಸ್ ಕೇಸ್‌ಗಳಿಗಾಗಿ ಅರ್ಚಕರ ಅಲೆದಾಟ – ಸೋಮೇಶ್ವರ ದೇಗುಲದಲ್ಲಿ ಮದುವೆ ಬಂದ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?