ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ರವರು ಶಾಲಾ ದಿನಗಳಲ್ಲಿ ಶಿಕ್ಷಕಿಯೊಂದಿಗೆ ಫ್ಲರ್ಟ್ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.
ವೀಕೆಂಡ್‍ಗಳಲ್ಲಿ ಬರುವ ದುಸ್ ಕಾ ದುಮ್- ದುಮ್ಡಾರ್ ನ ಚಿತ್ರಿಕರಣದ ವೇಳೆ ಸಲ್ಲು ತನ್ನ ಫ್ಲರ್ಟಿಂಗ್ ಇತಿಹಾಸವನ್ನು ಬಿಚ್ಚಿಟ್ಟಿದ್ದಾರೆ. ನಿಮಗೆ ಮೊದಲ ಬಾರಿಗೆ ಶಾಲಾ ಶಿಕ್ಷಕಿ ಜೊತೆ ಪ್ರೀತಿಯ ಬಲೆಗೆ ಸಿಲಿಕಿಕೊಂಡಿದ್ದಿರಾ ಎಂದು ಇಂಡಿಯನ್ಸ್ ಕಾರ್ಯಕ್ರಮದಲ್ಲಿ ಕೇಳಿದಾಗ ಸಲ್ಲು, ತನ್ನ ಶಾಲೆಯಲ್ಲಿ ಒಬ್ಬರು ಶಿಕ್ಷಕಿ ಮೇಲೆ ಪ್ರೀತಿ ಹುಟ್ಟಿತ್ತು. ಅಷ್ಟೇ ಅಲ್ಲದೆ ಅವರನ್ನು ನಾನು ತನ್ನ ಸೈಕಲ್‍ನಲ್ಲಿ ಮನೆವರಗೂ ಡ್ರಾಪ್ ಮಾಡುತ್ತಿದ್ದೆ. ಈ ಮೂಲಕ ಅವರು ನನ್ನ ಮುಂದೆ ಕುಳಿತುಕೊಳ್ಳುವಂತೆ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.
ಯಾರೊಬ್ಬರು ಶಾಲೆಯಲ್ಲಿ ಶಿಕ್ಷಕಿಯ ಜೊತೆ ಪ್ರೀತಿಯಲ್ಲಿ ಬೀಳದೆ ಇರಲು ಸಾಧ್ಯವಿಲ್ಲ. ಅದನ್ನು ಹೆಚ್ಚು ಜನರು ಒಪ್ಪಿಕೊಳ್ಳುವುದಿಲ್ಲ. ಆದರೆ ನಾನು ನನ್ನ ಶಿಕ್ಷಕಿ ಜೊತೆ ತುಂಬಾ ಫ್ಲರ್ಟ್ ಮಾಡುತ್ತಿದ್ದೆ ಎಂದು ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ.
ಸದ್ಯ ಸಲ್ಲು ದುಸ್ ಕಾ ದುಮ್- ದುಮ್ಡಾರ್ ವಿಕೆಂಡ್ ಕಾರ್ಯಕ್ರಮದಲ್ಲಿ ನಿರೂಪಕರಾಗಿದ್ದು, ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv