ತ್ರಿವರ್ಣ ಧ್ವಜ ಅರ್ಧಕ್ಕೆ ಇಳಿಸಿ ಮಾಜಿ ಪ್ರಧಾನಿಗೆ ರಾಜ್ಯ ಸರ್ಕಾರದಿಂದ ಗೌರವ

Public TV
1 Min Read
VIDHANA SOUDHA

ಬೆಂಗಳೂರು: ಮಾಜಿ ಪ್ರಧಾನಿ, ಅಜಾತ ಶತ್ರು ಹಾಗೂ ಭಾರತ ರತ್ನ ಪುರಸ್ಕೃತ ಅಟಲ್ ಬಿಹಾರಿ ನಿಧನರಾದ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರದಿಂದ ಅವರಿಗೆ ಗೌರವ ಸೂಚಿಸಲಾಯಿತು.

ವಿಧಾನಸೌಧ, ಹೈಕೋರ್ಟ್, ಸರ್ಕಾರಿ ಕಚೇರಿಗಳ ಮೇಲಿನ ತ್ರಿವರ್ಣ ಧ್ವಜ ಅರ್ಧಕ್ಕೆ ಇಳಿಸಿ ಗೌರವ ಸಲ್ಲಿಸಲಾಯಿತು. ಅಲ್ಲದೇ ಕರ್ನಾಟಕ ಸರ್ಕಾರದಿಂದ ಶ್ರದ್ಧಾಂಜಲಿ ಕೂಡ ಅರ್ಪಿಸಲಾಯಿತು.

ರಾಜ್ಯ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಹಿರಿಯ ನಾಯಕ ರಾಮಚಂದ್ರೇಗೌಡ, ಮಾಜಿ ಡಿಸಿಎಂ ಆರ್.ಅಶೋಕ್, ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

atal bihari vajpayee

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ವಿಧಿವಶರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಕೆಲ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಕೆಲ ತಿಂಗಳ ಹಿಂದೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಬಳಿಕ ಡಿಸ್ಚಾರ್ಜ್ ಆಗಿದ್ದರು. ಆದರೆ ನಂತರ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಟ್ಟಿನಲ್ಲಿ 9 ವಾರ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅಟಲ್ ಜಿ ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು.

ಯುಮುನಾ ನದಿ ದಂಡೆಯಲ್ಲಿರುವ ರಾಷ್ಟ್ರೀಯ ಸ್ಮೃತಿ ಸ್ಥಳದವರೆಗೆ ಅಂತಿಮ ಯಾತ್ರೆ ನಡೆಯಲಿದ್ದು, ಬಳಿಕ ಬ್ರಾಹ್ಮಣ ಸಂಪ್ರದಾಯದಂತೆ ಇಂದು ಸಂಜೆ ಅಂತ್ಯ ಸಂಸ್ಕಾರ ನಡೆಯಲಿದೆ. ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕವಿರುವ ವಿಜಯ್‍ಘಾಟ್ ಮತ್ತು ಶಾಂತಿವನದ ಪಕ್ಕದಲ್ಲೇ ಅಟಲ್ ಸ್ಮಾರಕ ನಿರ್ಮಾಣಕ್ಕೆ ನಗರಾಭಿವೃದ್ಧಿ ಇಲಾಖೆ 1.5 ಎಕರೆ ಜಮೀನು ಮೀಸಲಿರಿಸಿದೆ. ಒಟ್ಟಿನಲ್ಲಿ ಅಜಾತ ಶತ್ರುವಿನ ನಿಧನಕ್ಕೆ ಇಡೀ ದೇಶವೇ ಕಣ್ಣೀರು ಹಾಕುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

vlcsnap 2018 08 17 13h06m47s28

Share This Article
Leave a Comment

Leave a Reply

Your email address will not be published. Required fields are marked *