ಕೊಡಗು: ಮಹಾಮಳೆಗೆ ತತ್ತರಿಸಿರುವ ಕೊಡಗು ಹಾಗೂ ಕರಾವಳಿ ಭಾಗಗಳಿಗೆ ಶನಿವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟ ನೀಡಲಿದ್ದಾರೆ. ಈ ಸಂಬಂಧ ಶುಕ್ರವಾರ ರಾತ್ರಿ ಉಸ್ತುವಾರಿ ಸಚಿವರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಕುಮಾರಸ್ವಾಮಿ ಮಹತ್ವದ ಸಭೆ ನಡೆಸಿದ್ದಾರೆ.
ಕುಮಾರಸ್ವಾಮಿ ಅವರು ರಕ್ಷಣಾ ಕಾರ್ಯ, ಅಗತ್ಯ ಕ್ರಮದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಪರಿಹಾರ ಕಾರ್ಯದ ಬಗ್ಗೆ ಖುದ್ದು ಪರಿಶೀಲನೆ ಮಾಡಲಿದ್ದಾರೆ. ಜೊತೆಗೆ ಭಾನುವಾರವೂ ಕುಮಾರಸ್ವಾಮಿ ನಂಜನಗೂಡು ಹಾಗೂ ಕಬಿನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಿದ್ದು, ಸಂತ್ರಸ್ತರಿಗೆ ಗಂಜಿ ಕೇಂದ್ರಗಳ ಮೂಲಕ ಆಶ್ರಯ ಒದಗಿಸಲಾಗುತ್ತಿದೆ. ಇತ್ತ ರಕ್ಷಣಾ ಪಡೆಯು ಹೆಲಿಕಾಪ್ಟರ್ ಮೂಲಕ ಮಹಿಳೆಯರು, ಮಕ್ಕಳು ಸೇರಿದಂತೆ ಮುಳುಗಡೆ ಆಗುತ್ತಿರುವ ಪ್ರದೇಶಗಳ ಜನರನ್ನು ರಕ್ಷಣೆ ಮಾಡುತ್ತಿದ್ದಾರೆ. ಇದನ್ನು ಓದಿ: ಕೊಡಗು ಸಂತ್ರಸ್ತರಿಗೆ ಸಹಾಯ ಮಾಡಿ- ಏನು ಕೊಡಬಹುದು? ಯಾರನ್ನು ಸಂಪರ್ಕಿಸಬಹುದು? ಇಲ್ಲಿದೆ ವಿವರ
ಕೊಡಗು ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಆಶ್ರಯ ಹಾಗೂ ಆಹಾರ ಒದಗಿಸಲು ಕೊಡವ ಸಮುದಾಯವು ಮುಂದಾಗಿದೆ. ಸಂತ್ರಸ್ತರಿಗೆ ಹಾಸಿಗೆ, ಆಹಾರ ಧಾನ್ಯ ಹಾಗೂ ಅಗತ್ಯ ವಸ್ತುಗಳನ್ನು ಒದಗಿಸಲು ಸಹಾಯ ಮಾಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿಕೊಂಡಿದ್ದಾರೆ. ‘ಡೊನೆಟ್ ಕೊಡಗು’ ಎನ್ನವ ಹೆಸರಿನಲ್ಲಿ ಪರಿಹಾರ ನಿಧಿ ಸಂಗ್ರಹಿಸಲಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv