ದ್ರೋಣ ಚಿತ್ರೀಕರಣ ವೇಳೆ ಪುಟಾಣಿ ಜೊತೆ ಕಾಲಕಳೆದ ಶಿವಣ್ಣ- ವಿಡಿಯೋ ವೈರಲ್

Public TV
1 Min Read
Drona Shivarajkumar collage copy

ಬೆಂಗಳೂರು: ಟಗರು ಚಿತ್ರದ ನಂತರ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ‘ದ್ರೋಣ’ ಸಿನಿಮಾದ ಚಿತ್ರೀಕರಣದಲ್ಲಿ ಫುಲ್ ಬ್ಯೂಸಿಯಾಗಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ವೇಳೆ ಶಿವಣ್ಣ ಅದೇ ಶಾಲೆಯಲ್ಲಿ ಓದುತ್ತಿರುವ ಪುಟಾಣಿ ಬಾಲಕಿ ಜೊತೆ ಸ್ವಲ್ಪ ಸಮಯವನ್ನು ಕಳೆದಿದ್ದಾರೆ.

ಶಿವಣ್ಣ ಶೂಟಿಂಗ್ ನಲ್ಲಿ ತಮ್ಮ ಬಿಡುವಿನ ವೇಳೆಯಲ್ಲಿ ಬಾಲಕಿಯೊಂದಿಗೆ ಸಮಯ ಕಳೆದಿದ್ದಾರೆ. ಈ ವೇಳೆ ಬಾಲಕಿ ಹಾಡು ಸಹ ಹೇಳಿದ್ದು, ಪುಟಾಣಿಯ ಹಾಡಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಶಿವಣ್ಣ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

drona shivarajkumar 2

ಬಾಲಕಿಯ ಹೆಸರು ದೀಪ್ತಿಯಾಗಿದ್ದು, ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾಳೆ. ಕಳೆದ ಒಂದು ವಾರದಿಂದ ಈ ಶಾಲಾ ಆವರಣದಲ್ಲಿ ದ್ರೋಣ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ವೇಳೆ ಬಾಲಕಿಯ ಸುಮಧುರ ಕಂಠಕ್ಕೆ ಮೆಚ್ಚುಗೆಯನ್ನು ನೀಡಿ ಬಾಲಕಿ ಕಟ್ಟಿದ ರಾಕಿಗೆ ಮನಸೋತಿದ್ದಾರೆ.

ಈ ಚಿತ್ರದಲ್ಲಿ ಇನಿಯಾ, ಸ್ವಾತಿ ಶರ್ಮ, ರಂಗಾಯಣ ರಘು, ವಿ. ಮನೋಹರ್, ಸಾಧುಕೋಕಿಲ, ಬಾಬು ಹಿರಣ್ಣಯ್ಯ, ರೇಖಾದಾಸ್, ಪ್ರಕಾಶ್ ಹೆಗ್ಗೋಡು, ಆನಂದ್, ಶಂಕರ ರಾವ್, ವಿಜಯಕಿರಣ್, ನಟಿಸುತ್ತಿದ್ದಾರೆ. ಈ ಚಿತ್ರವನ್ನು ಬಿ. ಮಹದೇವ, ಬಿ. ಸಂಗಮೇಶ್ ಹಾಗೂ ಶೇಶು ಚಕ್ರವರ್ತಿ ನಿರ್ಮಿಸುತ್ತಿದ್ದಾರೆ. ಪ್ರಮೋದ್ ಚಕ್ರವರ್ತಿ ಈ ಚಿತ್ರದ ಕಥೆ, ಸಂಭಾಷಣೆ ಹಾಗೂ ನಿರ್ದೇಶನವನ್ನು ಮಾಡುತ್ತಿದ್ದು, ರಾಮ್ ಕ್ರಿಶ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

https://www.youtube.com/watch?v=qqLSQj-sTv8

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *