-ವ್ಯಾಪಾರಿಗಳ ಜೊತೆ ಸಿಎಂ ಚರ್ಚೆ
ಬೆಂಗಳೂರು: ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಹೊಸ ಬಡವರ ಬಂಧು ಯೋಜನೆ ಜಾರಿಗೆ ಚಿಂತನೆ ನಡೆಸುತ್ತಿದ್ದು, ಇಂದು ಬೆಳ್ಳಂಬೆಳಗ್ಗೆ ಬೀದಿ ಬದಿ ವ್ಯಾಪಾರಿಗಳು ಹಾಗೂ ಮಾರುಕಟ್ಟೆ ವ್ಯಾಪಾರಿಗಳಿಗಳ ಜೊತೆ ಸಿಎಂ ಕುಮಾರಸ್ವಾಮಿ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ.
ಈ ವೇಳೆ, ಬೀದಿ ಬದಿ ವ್ಯಾಪಾರಿಗಳು ಮತ್ತು ಮಾರುಕಟ್ಟೆ ವ್ಯಾಪಾರಿಗಳು ಸದ್ಯ ಮೀಟರ್ ಬಡ್ಡಿ ದಂಧೆಯಿಂದಾಗಿ ತಾವು ಅನುಭವಿಸುತ್ತಿರುವ ಕಷ್ಟ ಕೋಟಲೆಗಳ ಬಗ್ಗೆ ಅಳಲು ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರ ಜೊತೆ ತೋಡಿಕೊಂಡರು.
ಇದೇ ವೇಳೆ, ಮಾರುಕಟ್ಟೆಯಲ್ಲಿ ಸಚಿವ ಬಂಡೆಪ್ಪ ಕಾಶೆಂಪೂರ, ವ್ಯಾಪಾರಿಗಳಿಂದ ಅಹವಾಲು ಸ್ವೀಕರಿಸಿದ್ರು. ಈ ವೇಳೆ ಮಾತನಾಡಿದ ಅವರು, ಮೀಟರ್ ಬಡ್ಡಿ ದಂಧೆಕೋರರಿಂದ ವ್ಯಾಪಾರಿಗಳನ್ನ ರಕ್ಷಿಸಲು ಬಡವರ ಬಂಧು ಯೋಜನೆ ಜಾರಿಗೆ ತರಲಿದ್ದೇವೆ. ಈ ಯೋಜನೆ ಬೀದಿ ವ್ಯಾಪಾರಿಗಳಿಗೆ ಬಹಳ ಅನೂಕೂಲವಾಗಿದೆ. ಈ ಯೋಜನೆ ಬಗ್ಗೆ ವ್ಯಾಪಾರಿಗಳ ಅನಿಸಿಕೆಯನ್ನು ಪಡೆಯಲು ಬಂದಿದ್ದೇನೆ. ಕೆಲವೇ ದಿನಗಳಲ್ಲಿ ಈ ಯೋಜನೆಗೆ ಚಾಲನೆ ದೊರೆಯಲಿದೆ ಅಂತಾ ಸ್ಪಷ್ಟಪಡಿಸಿದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publict