ಹಾಸನ: ಸ್ವಕ್ಷೇತ್ರಕ್ಕೆ ಬೆಳಗಾವಿಯಿಂದ ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ(ಕೆಶಿಪ್) ಕಚೇರಿಯನ್ನು ಸ್ಥಳಾಂತರ ಮಾಡಿಸಿಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಚ್‍ಡಿ ರೇವಣ್ಣ ಈಗ ಹಾಸನಕ್ಕೆ ಐಐಟಿ ಹೇಗೆ ತರಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ.
ನಗರದ ಕಲಾಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2019ರ ವೇಳೆಗೆ ಜಿಲ್ಲೆಯಲ್ಲಿ ಐಐಟಿ ಕಾಲೇಜು ಆರಂಭವಾಗುವುದು ನಿಶ್ಚಿತ. ಐಐಟಿಯನ್ನು ಹಾಸನ ಜಿಲ್ಲೆಗೆ ಹೇಗೆ ತರಬೇಕೆಂದು ನನಗೆ ಗೊತ್ತಿದೆ. ಈಗಾಗಲೇ ಅದರ ಬಗ್ಗೆ ಪ್ರಯತ್ನವನ್ನು ನಡೆಸುತ್ತಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: `ಮೇಡಂ ಎಣ್ಣೆಕಾಟ ತಪ್ಪಿಸಿ’-ಡಿಸಿ ರೋಹಿಣಿ ಸಿಂಧೂರಿಗೆ ರೇವಣ್ಣ ಮನವಿ+
ಹಾಸನ ಜಿಲ್ಲೆಯಲ್ಲಿ ಮತ್ತೊಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡುವ ಗುರಿಯನ್ನು ಹೊಂದಿದ್ದೇನೆ. ಈಗಾಗಲೇ ಹೊಳೆನರಸೀಪುರ ಕ್ಷೇತ್ರದಲ್ಲಿ ಒಟ್ಟು ಏಳು ಪದವಿ ಕಾಲೇಜುಗಳನ್ನು ಹೊಂದುವ ಮೂಲಕ ದೇಶದಲ್ಲೇ ಅತಿ ಹೆಚ್ಚು ಪದವಿ ಕಾಲೇಜುಗಳನ್ನು ಹೊಂದಿರುವ ವಿಧಾನಸಭಾ ಕ್ಷೇತ್ರವೆಂದು ಹೆಸರುಗಳಿಸಿಕೊಂಡಿದೆ ಎಂದು ಹೇಳಿದರು. ಇದನ್ನೂ ಓದಿ:ರೇವಣ್ಣ ಸ್ವಕ್ಷೇತ್ರಕ್ಕೆ ಕೆಶಿಪ್ ಕಚೇರಿ ಸ್ಥಳಾಂತರ
ಇತ್ತೀಚಿನ ದಿನಗಳಲ್ಲಿ ಶಾಲೆಗಳಲ್ಲಿನ ಶಿಕ್ಷಣದ ಮಟ್ಟ ಕುಸಿಯುತ್ತಿದೆ. ಇದರ ಬಗ್ಗೆ ಶಿಕ್ಷಕರು ಗಮನ ಹರಿಸಬೇಕು. ಇದೇ ರೀತಿ ಮುಂದುವರಿದರೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅಲ್ಲದೇ ಸರ್ಕಾರದಿಂದಲೇ ಇಂಗ್ಲೀಷ್ ಶಾಲೆಗಳನ್ನು ತೆರೆಯುವ ಉದ್ದೇಶ ಹೊಂದಿದ್ದೇವೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರೇ ತಮ್ಮ ಮಕ್ಕಳನ್ನು ಇಂಗ್ಲೀಷ್ ಶಾಲೆಗಳಲ್ಲಿ ಓದಿಸುತ್ತಿದ್ದಾರೆ ಎಂದು ಹಾಸನದ ಕಸಾಪ ಅಧ್ಯಕ್ಷ ಮಂಜೇಗೌಡರ ಸಮ್ಮುಖದಲ್ಲೇ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೂರೇ ತಿಂಗಳಲ್ಲಿ ಬಿಜೆಪಿಯನ್ನು ನಗರದಿಂದ ಕಳುಹಿಸಿಲ್ಲವೇ: ರೇವಣ್ಣ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv