ಪ್ಲಾಸ್ಟಿಕ್ ನಿಷೇಧಕ್ಕೆ ಸರ್ಕಾರದ ಮತ್ತೊಂದು ಮಹತ್ವದ ಹೆಜ್ಜೆ

Public TV
1 Min Read
Palstic bottel 2

ಬೆಂಗಳೂರು: ಪ್ಲಾಸ್ಟಿಕ್ ಬ್ಯಾಗ್, ಲೋಟ ಬ್ಯಾನ್ ಆಗಿದೆ. ಈ ಎಲ್ಲ ಬೆಳವಣಿಗೆ ನಡುವೆ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಸರ್ಕಾರದ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಾಟರ್ ಬಳಕೆ ಮಾಡುವಂತಿಲ್ಲ ಎಂಬ ಕಟ್ಟುನಿಟ್ಟಿನ ಆದೇಶವನ್ನ ಹೊರಡಿಸಿದೆ.

ಏನದು ಆದೇಶ?:
1. ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು, ಸರ್ಕಾರದಿಂದ ಅನುದಾನ ಪಡೆಯುವಂತಹ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ-ಸಮಾರಂಭ, ಕಾರ್ಯಾಗಾರ ಸೇರಿದಂತೆ ಇತರೆ ಕಾರ್ಯಕ್ರಮಗಳಲ್ಲಿ 20 ಲೀಟರ್ ಅಥವಾ ಅದಕ್ಕೂ ಹೆಚ್ಚಿನ ಸಾಮಥ್ರ್ಯದ ಕ್ಯಾನ್‍ಗಳಲ್ಲಿ ಶುದ್ಧೀಕರಿಸಿದ ಕುಡಿಯುವ ನೀರಿನ ವಿತರಣಾ ವ್ಯವಸ್ಥೆ ಏರ್ಪಡಿಸತಕ್ಕದ್ದು.

Palstic bottel 3

2. ಸರ್ಕಾರದ ಅಂಗೀಕರಿಸಲ್ಪಟ್ಟ ಸಂಸ್ಥೆಗಳಿಂದ ಖರೀದಿಸಿದ ಆರ್‍ಓ ಮತ್ತು ನೀರು ಶುದ್ಧೀಕರಣ ಘಟಕಗಳನ್ನು ಅನುಸ್ಥಾಪಿಸಿ, ಗಾಜಿನ ಲೋಟ ಅಥವಾ ಸ್ಟೀಲ್ ಲೋಟ ಅಥವಾ ಪೇಪರ್ ಲೋಟ ಅಥವಾ ಇತರೆ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ನೀರು ಕುಡಿಯುವ ವ್ಯವಸ್ಥೆ ಮಾಡುವುದು.

3. ಎಲ್ಲ ಸರ್ಕಾರಿ ಹಾಗು ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಸೇರಿದಂತೆ ಸರ್ಕಾರದಿಂದ ಅನುದಾನ ಪಡೆಯುವಂತಹ ಸಂಸ್ಥೆಗಳ ಕಚೇರಿಗಳಲ್ಲಿ ಸಾರ್ವಜನಿಕರಿಗಾಗಿ ಶುದ್ಧ ಕುಡಿಯುವ ನೀರಿಗಾಗಿ ಕೇಂದ್ರ ಸರ್ಕಾರದ ಜಾಲತಾಣ https://gem.gov.in/ ರಲ್ಲಿ ಅನುಮೋದಿಸಲ್ಪಟ್ಟಿರುವ ಸಂಸ್ಥೆಗಳಿಂದ ಖರೀದಿಸಿದ ಅಥವಾ ಯಾವುದಾದರೂ ಉತ್ತಮ ಆರ್‍ಓ ಶುದ್ಧ ನೀರಿನ ಘಟಕಗಳನ್ನು ವ್ಯವಸ್ಥಾನಗೊಳಿಸುವುದು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Palstic bottel 1

Share This Article
Leave a Comment

Leave a Reply

Your email address will not be published. Required fields are marked *