ರಾಮನಗರ: ಅತ್ಯಾಚಾರ ಹಾಗೂ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿಯ ನಿತ್ಯಾನಂದ ಧ್ಯಾನಪೀಠದ ನಿತ್ಯಾನಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಸತತ ಮೂರನೇ ಬಾರಿಗೆ ವಿಚಾರಣೆ ನಿತ್ಯಾನಂದ ಗೈರಾಗಿದ್ದ. ಈ ಬಗ್ಗೆ ಕಳೆದ ಬಾರಿಯ ವಿಚಾರಣೆಯಲ್ಲೇ ನ್ಯಾಯಾಧೀಶರಾದ ಗೋಪಾಲಕೃಷ್ಣ ರೈ ನಿತ್ಯಾನಂದ ಪರ ವಕೀಲರಿಗೆ ಎಚ್ಚರಿಕೆ ನೀಡಿದ್ದರು. ಅಲ್ಲದೇ ಕಳೆದ ಎರಡು ವಿಚಾರಣೆ ವೇಳೆ ಪ್ರಕರಣದ ಪ್ರಮುಖ ಸಾಕ್ಷಿ ಲೆನಿನ್ ಕುರುಪ್ಪನ್ ವಿಚಾರಣೆ ನಡೆಸುವಾಗಲೂ ಸಹ ನಿತ್ಯಾನಂದ ಹಾಜರಾಗಿರಲಿಲ್ಲ.
ಕಳೆದ ವಿಚಾರಣೆಯಲ್ಲಿ ಸಿಐಡಿ ಪರ ವಕೀಲರು ವಿಚಾರಣೆಯನ್ನ ಮಂದಗತಿಗೆ ದೂಡುವ ಯತ್ನ ನಡೆಸಲಾಗುತ್ತಿದೆ. ಅಲ್ಲದೇ ಸುಪ್ರೀಂ ಕೋರ್ಟ್‍ನ ಆದೇಶವಿದ್ದರೂ ನಿತ್ಯಾನಂದ ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಗುರುವಾರ ನಡೆದ ವಿಚಾರಣೆಯಲ್ಲಿಯೂ ಗೈರಾದ ಹಿನ್ನೆಲೆಯಲ್ಲಿ ನಿತ್ಯಾನಂದನಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ, ಪ್ರಕರಣದ ವಿಚಾರಣೆಯನ್ನು ಇದೇ ಸೆಪ್ಟೆಂಬರ್ ತಿಂಗಳ 14ಕ್ಕೆ ಮುಂದೂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv