ಬೆಂಗಳೂರು: ರಾಜ್ಯ ಸರ್ಕಾರ ಅಧಿಕೃತ ಸಭೆ, ಸಮಾರಂಭಗಳು ಹಾಗೂ ಸರಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್‍ಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ತಕ್ಷಣದಿಂದ ಜಾರಿಗೆ ಬರುವಂತೆ ಸೆ.5 ರಂದು ಆದೇಶವನ್ನು ಪ್ರಕಟಿಸಿದೆ. ರಾಜ್ಯಾದ್ಯಂತ ಸರಕಾರಿ ಸ್ವಾಮ್ಯದ ನಿಗಮ, ಮಂಡಳಿ, ವಿಶ್ವವಿದ್ಯಾಲಯ ಹಾಗೂ ಸರಕಾರಿ ಅನುದಾನದ ಯಾವುದೇ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆಯನ್ನು ನಿಷೇಧಿಸಲಾಗಿದೆ.
ಪ್ಲಾಸ್ಟಿಕ್ ಬಾಟಲ್ ಬದಲಿಗೆ 20 ಲೀಟರ್ ಕ್ಯಾನ್ ಅಥವಾ ಹೆಚ್ಚಿನ ಸಾಮರ್ಥ್ಯದ ಕ್ಯಾನ್‍ಗಳಲ್ಲಿ ಶುದ್ಧೀಕರಿಸಿದ ಕುಡಿಯುವ ನೀರಿನ ವಿತರಣಾ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.
ಕಚೇರಿಗಳು, ಸಭೆಗಳು ನಡೆಯುವ ಜಾಗಗಳಲ್ಲಿ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ ಗಾಜಿನ ಲೋಟ, ಸ್ಟೀಲ್ ಲೋಟ ಅಥವಾ ಪೇಪರ್ ಲೋಟದಲ್ಲಿ ನೀರು ಕುಡಿಯಲು ವ್ಯವಸ್ಥೆ ಮಾಡಬೇಕು. ಇದರಿಂದಾಗಿ ನೀರಿನ ಬಾಟಲಿ ಖರೀದಿಗೆ ಮಾಡುತ್ತಿರುವ ಖರ್ಚು ಕೂಡ ಉಳಿತಾಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv