ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಶನಿವಾರ ರಾತ್ರಿ ಭಾರೀ ಮಳೆಯಾಗಿದ್ದು, ಒಂದು ರಾತ್ರಿ ಸುರಿದ ಮಳೆಗೆ ಹಳ್ಳಕೊಳ್ಳಗಳು ತುಂಬಿದ್ದು, ಸೇತುವೆ ಮುಗಳುಗಡೆಯಾಗಿದೆ.
ಕೊಳ್ಳೇಗಾಲ ತಾಲೂಕಿನ ಲೊಕ್ಕನಹಳ್ಳಿ ಸುತ್ತಮುತ್ತ ಭಾರೀ ಮಳೆ ಬಿದ್ದಿರುವ ಹಿನ್ನೆಲೆಯಲ್ಲಿ ಈ ಭಾಗದ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಪರಿಣಾಮ ಪಿ.ಜಿ.ಪಾಳ್ಯ ಉಯಿಲನತ್ತ ರಸ್ತೆಯಲ್ಲಿರುವ ಸೇತುವೆ ಮುಳುಗಡೆಯಾಗಿದೆ. ಗ್ರಾಮಸ್ಥರು ಹಗ್ಗದ ಸಹಾಯದಿಂದ ಸೇತುವೆ ದಾಟಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಳೆ ಹೆಚ್ಚಾದಾಗಲೆಲ್ಲಾ ಗ್ರಾಮಸ್ಥರು ಪರದಾಡುವಂತಾಗಿದೆ. ಕಳೆದ ವರ್ಷ ಇದೇ ಹಳ್ಳದಲ್ಲಿ ಯುವಕನೊಬ್ಬ ಕೊಚ್ಚಿ ಹೋಗಿದ್ದು, ಗ್ರಾಮಸ್ಥರು ರಕ್ಷಣೆ ಮಾಡಿದ್ದರು. ಸೇತುವೆ ಬಹಳ ಕೆಳಮಟ್ಟದಲ್ಲಿದೆ ಅಲ್ಲದೆ ಶಿಥಿಲಗೊಂಡಿದ್ದು, ಯಾವುದೇ ಕ್ಷಣದಲ್ಲಿ ಕೊಚ್ಚಿಹೋಗುವ ಸಾಧ್ಯತೆಗಳಿವೆ. ಹಾಗಾಗಿ ಸೇತುವೆ ನಿರ್ಮಿಸಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv