ಕಾರವಾರ: ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುವ ಯಾವುದೇ ನಿರ್ಧಾರವನ್ನು ಮಾಡಿಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಈ ಕ್ಷಣದವರೆಗೆ ಎಲ್ಲಯೂ ಹೋಗುವ ನಿರ್ಧಾರ ಮಾಡಿಲ್ಲ. ಅಭಿಮಾನಿಗಳು ಬಿಜೆಪಿಗೆ ಹೋಗಿ ಎಂದು ಹೇಳುತ್ತಾರೆ. ಅದು ಅವರ ಅಭಿಮಾನ. ಆದರೆ ಈ ಕ್ಷಣದವರೆಗೆ ಯಾವುದೇ ನಿರ್ಧಾರ ಮಾಡಿಲ್ಲ ಊಹಾಪೋಹದ ಸುದ್ದಿಗಳಿಗೆ ನಾವು ಬೆಲೆ ಕೊಡುವುದಿಲ್ಲ. ಮಾಧ್ಯಮಗಳಲ್ಲಿ ಕಪೋಲಕಲ್ಪಿತ ಸುದ್ದಿಗಳು ಬರುತ್ತಿವೆ. ಅದಕ್ಕೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದರು.
ವಿ.ಎಸ್ ಪಾಟೀಲ್ ಅವರು ತಾನು ಬಿಜೆಪಿಗೆ ಬರುತ್ತೇನೆ ಎಂದು ಹೇಳಿದ್ದಾರೆ. ಬಿಜೆಪಿಗರು ಅವರ ಮನಸ್ಸಿಗೆ ಬಂದಂತೆ ಹೇಳುತ್ತಾರೆ. ಅದಕ್ಕೆಲ್ಲ ಅವರೇ ಉತ್ತರಿಸಬೇಕು. ನಾವು ಉತ್ತರಿಸಲು ಸಾಧ್ಯವಿಲ್ಲ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv