ಯಾದಗಿರಿ: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಒಳ ಜಗಳದಿಂದ ಶೀಘ್ರ ಪತನವಾಗುತ್ತದೆ ಎಂದು ಎಂದು ಅಫಜಲಪುರ ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ್ ಭವಿಷ್ಯ ನುಡಿದಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ಸಿನ 20 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಮೈತ್ರಿ ಸರ್ಕಾರದ ಗೊಂದಲದಿಂದ ಅಸಮಧಾನಗೊಂಡವರು ಬಿಜೆಪಿಗೆ ಬರುವುದಾದರೆ ಬನ್ನಿ ಅಂತ ಬಿಜೆಪಿ ವರಿಷ್ಠರು ಹೇಳಿದ್ದಾರೆ. ಬಿಜೆಪಿಯ 104 ಶಾಸಕರಲ್ಲಿ ಯಾರೊಬ್ಬರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಏಕೆಂದರೆ ನಮ್ಮಲ್ಲಿ ಸರಿಯಾದ ಶಿಸ್ತು ಇದೆ. ಸಾಮಾನ್ಯರಿಗೆ ನ್ಯಾಯ ದೊರಕಿಸಿ ಕೊಡುತ್ತದೆ. ಕೋಡಿಮಠದ ಸ್ವಾಮಿಗಳ ಜ್ಯೋತಿಷ್ಯ ಹೇಳಿದಂತೆ ಮತ್ತೆ ಯಡಿಯೂರಪ್ಪ ಅವರೇ 100% ಸಿಎಂ ಆಗುತ್ತಾರೆ ಎಂದರು.
ಹೈದರಾಬಾದ್ ಕರ್ನಾಟಕ ಭಾಗದ ಅನೇಕ ನಾಯಕರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಆದರೆ ಕಾಂಗ್ರೆಸ್ ಲೋಕಸಭೆಯ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸ್ವಾರ್ಥ ರಾಜಕೀಯಕ್ಕಾಗಿ ನನ್ನನ್ನು ಮೂಲೆಗುಂಪು ಮಾಡಲಾಯಿತು ಎಂದು ದೂರಿದರು.
ಅಧಿಕಾರಿಗಳಿಗೆ ಒದಿತ್ತೀನಿ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ, ನಾವು ಬಚ್ಚಾ ಇದ್ದೇವೆ ಅವರ ಯೋಗ್ಯತೆಯ ತಕ್ಕಂತೆ ಮಾತನಾಡಿದ್ದಾರೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv