ತುಮಕೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ನಿರ್ವಿರ್ಯರಾಗಿದ್ದಾರೆ ಎಂದು ಬಿಜೆಪಿಯ ಮಾಜಿ ಸಂಸದ ಜಿ.ಎಸ್.ಬಸವರಾಜು ಹೇಳಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯ ಮೂವರು ಮಂತ್ರಿಗಳು ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ನಿರ್ವಿರ್ಯರಾಗಿದ್ದಾರೆ. ತುಮಕೂರು ಜಿಲ್ಲೆ ನಾಶ ಮಾಡಲು ಇವರು ಮುಂದಾಗಿದ್ದಾರೆ. ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಸೇರಿದಂತೆ ಎಲ್ಲರೂ ನಿರ್ವಿಯರು. ಪರಮೇಶ್ವರ್ ಝಿರೋ ಟ್ರಾಫಿಕ್‍ಗೋಸ್ಕರ ಹೋರಾಟ ಮಾಡುತ್ತಿದ್ದಾರೆ ಎನ್ನುವ ಮೂಲಕ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
ಡಿ.ಕೆ. ಸಹೋರದರರ ದಬ್ಬಾಳಿಕೆ ಜಿಲ್ಲೆಯ ಮೇಲೆ ಹೆಚ್ಚಾಗಿದೆ. ಅಲ್ಲದೇ ಜಿಲ್ಲೆಗೆ ಬರುತ್ತಿರುವ ಹೇಮಾವತಿ ನೀರನ್ನು ಮಾಗಡಿ ಹಾಗೂ ಕನಕಪುರಕ್ಕೆ ಕೊಂಡೊಯ್ಯಲು ಸಂಚು ರೂಪಿಸುತ್ತಿದ್ದಾರೆ. ಲಿಂಕಿಂಗ್ ಕೆನಾಲ್ ಮೂಲಕ ನೀರು ಸಾಗಿಲು ಪ್ಲಾನ್ ಮಾಡಿದ್ದಾರೆ. ಇಷ್ಟಾದರೂ ಜಿಲ್ಲೆಯ ಯಾವೊಬ್ಬ ಕಾಂಗ್ರೆಸ್ ಹಾಗೂ ಜೆಡಿಎಸ್ ನವರು ಚಕಾರ ಎತ್ತುತ್ತಿಲ್ಲ. ಡಿ.ಕೆ.ಶಿವಕುಮಾರ್ ವಿರುದ್ಧ ಯಾರು ಮಾತನಾಡುತ್ತಿಲ್ಲ. ಡಿಕೆಶಿಯ ಗೂಂಡಾ ಪ್ರವೃತ್ತಿ ಹೆಚ್ಚಾಗಿದೆ. ಹೀಗೆ ಮುಂದುವರಿದರೆ ಅವರನ್ನು ನಗರದ ಒಳಗೂ ಸಹ ಸೇರಿಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv