ದಾವಣಗೆರೆ: ಕೈ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಈಗ ದೋಸ್ತಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸರ್ಕಾರ ವೀರಶೈವ ಲಿಂಗಾಯತ ಸಮಾಜವನ್ನು ಹತ್ತಿಕ್ಕುವ ಕೆಲಸ ಮಾಡಿದೆ. 2 ಕೋಟಿ ಜನರಿದ್ದ ಸಮಾಜ, ಈಗ ಜಾತಿಗಣತಿಯಿಂದ 85 ಸಾವಿರಕ್ಕೆ ಇಳಿಮುಖವಾಗಿದೆ ಎಂದು ಕಿಡಿಕಾರಿದ್ದಾರೆ.
ಹರಿಹರ ಹೊರವಲಯದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಆಯೋಜಿಸಿದ್ದ ಡಾ.ಮಹಾಂತ ಸ್ವಾಮೀಜಿ ಸ್ಮರಣೋತ್ಸವದಲ್ಲಿ ಮಾತನಾಡಿದ ಅವರು, ವೀರಶೈವ ಸಮಾಜವನ್ನು ತುಳಿಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ. ನಾನು ಸಚಿವನಾಗಿದ್ದಾಗಲೂ ಸರ್ಕಾರದ ಕ್ರಮ ಖಂಡಿಸಿದ್ದೇನೆ. ನಮ್ಮ ಸಮಾಜವನ್ನು ತುಳಿಯುವ ಯತ್ನಿಸುವ ಯಾವುದೇ ಸರ್ಕಾರವಾದರೂ ಸರಿ, ನಾನು ತರಾಟೆಗೆ ತಗೆದುಕೊಳ್ಳುತ್ತೇನೆ ಎಂದು ಕಿಡಿಕಾರಿದರು.
ಇತ್ತ ಸಮ್ಮಿಶ್ರ ಸರ್ಕಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎನ್ನುವ ಅಸಮಾಧಾನ ಹೆಚ್ಚಾಗುತ್ತಿದೆ. ಜೊತೆಗೆ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಡಿಸಿಎಂ ಹುದ್ದೆ ಕೊಡಲಿಲ್ಲ ಎನ್ನುವ ಹೊಗೆ ಇನ್ನೂ ವೀರಶೈವ ಲಿಂಗಾಯತ ಸಮಾಜದಲ್ಲಿ ಜೀವಂತವಾಗಿದೆ. ಹೀಗಾಗಿ ದೋಸ್ತಿ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಶಾಮನೂರು ಶಿವಶಂಕರಪ್ಪ ಅವರು ವಾಗ್ದಾಳಿ ನಡೆಸುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv