ಮೈಸೂರು: ಜಿಲ್ಲೆಯ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಚಾಲಕನ ಅಜಾಗರೂಕತೆ ಗ್ಯಾಸ್ ತುಂಬಿದ್ದ ಟ್ಯಾಂಕರ್ ಒಂದು ಪಲ್ಟಿಯಾಗಿದೆ.
ದಟ್ಟಗಳ್ಳಿ ರಿಂಗ್ ರಸ್ತೆಯ ಸಾರಾ ಕನ್ವೆನ್ಷನ್ ಹಾಲ್ ಬಳಿ ಈ ಘಟನೆ ನಡೆದಿದೆ. ಈ ಲಾರಿಯಲ್ಲಿ 18 ಟನ್ ಗ್ಯಾಸ್ ತುಂಬಲಾಗಿತ್ತು ಎಂದು ವರದಿಯಾಗಿದೆ. ಚಾಲಕನ ಅತೀವೇಗದ ಚಾಲನೆಯೇ ಈ ಅವಘಡಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಗ್ಯಾಸ್ ತುಂಬಿಕೊಂಡು ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಬರುತ್ತಿತ್ತು. ಅತೀ ವೇಗದಲ್ಲಿ ಟ್ಯಾಂಕರ್ ಓಡಿಸುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗ್ಯಾಸ್ ಟ್ಯಾಂಕರ್ ಪಲ್ಟಿಯಾದರೂ ಗ್ಯಾಸ್ ಮಾತ್ರ ಸೋರಿಕೆ ಆಗಿಲ್ಲ. ಇದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಈ ಬಗ್ಗೆ ಸ್ಥಳದಲ್ಲಿದ್ದವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಮತ್ತು ಕುವೆಂಪುನಗರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪಲ್ಟಿಯಾಗಿದ್ದ ಟ್ಯಾಂಕರ್ ನ ತೆರವು ಕಾರ್ಯವನ್ನು ಮಾಡಿದ್ದಾರೆ. ಈ ಘಟನೆ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv