ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಬಳಿ ನಡೆದಿದೆ.
ಇಂದು ಬೆಳಗ್ಗೆ ಬೆಂಗಳೂರಿನಿಂದ ಬೈಲಹೊಂಗಲಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿದ್ದು, ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಕೂದಲೆಳೆಯ ಅಂತರದಲ್ಲಿ ಆಗಬಹುದಾದ ಬಹುದೊಡ್ಡ ದುರಂತ ತಪ್ಪಿದೆ. ಪ್ಟಲಿಯಾದ ರಭಸಕ್ಕೆ ಬಸ್ಸಿನ ಒಂದು ಭಾಗ ಸಂಪೂರ್ಣ ಹಾನಿಯಾಗಿದ್ದು, ನಡುರಸ್ತೆಯಲ್ಲಿಯೇ ಉರುಳಿಬಿದ್ದ ಪರಿಣಾಮ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನ ಹುಬ್ಬಳ್ಳಿಯ ಕಿಮ್ಸ್‍ಗೆ ದಾಖಲಿಸಲಾಗಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದಿರುವ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv