ರಾಮನಗರ: ಇಷ್ಟು ದಿನ ತೆರೆಮರೆಯಲ್ಲಿ ಕಸರತ್ತು ನಡೆಸ್ತಿದ್ದ ರಾಮನಗರ ದೋಸ್ತಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಇಂದಿನಿಂದ ಫೀಲ್ಡ್ ಗಿಳಿಯಲಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಸಭೆ ಮೇಲೆ ಸಭೆ ಮಾಡ್ತಿದ್ದ ಅವರು ಇಂದಿನಿಂದ ಅಧಿಕೃತವಾಗಿ ಅಖಾಡಕ್ಕೆ ಇಳಿಯಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ರಾಮನಗರ ಜಿಲ್ಲೆಯ ಕೆಂಪನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಕಸಬಾ ಹೋಬಳಿಯ 32 ಹಳ್ಳಿಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಕೆಲ ರಾಜ್ಯ ನಾಯಕರು, ಸ್ಥಳೀಯ ಮುಖಂಡರು ಅನಿತಾ ಕುಮಾರಸ್ವಾಮಿಗೆ ಸಾಥ್ ನೀಡಲಿದ್ದಾರೆ. ಇದಕ್ಕೆ ಪೂರ್ವತಯಾರಿಯಾಗಿ ನಿನ್ನೆ ಹುಸಣನಹಳ್ಳಿ ರಸ್ತೆಯಲ್ಲಿನ ಹಜ್ಮತುಲ್ಲಾ ಫಾರಂಹೌಸ್‍ನಲ್ಲಿ ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿದ್ರು.
ಇತ್ತ ಡಿಕೆ ಶಿವಕುಮಾರ್ ಕೂಡಾ ಬೆಂಗಳೂರಿನ ನಿವಾಸದಲ್ಲಿ ಸಭೆ ನಡೆಸಿದ್ರು. ರಾಮನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಾಮನಗರ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಗೂ ರಾಮನಗರ ಮುಸ್ಲಿಂ ಸಮುದಾಯದ ಪ್ರಮುಖ ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ನಡೆಸಲಾಯಿತು. ರಾಮನಗರ ಉಸ್ತುವಾರಿ ಡಿ ಕೆ ಶಿವಕುಮಾರ್, ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲ್ಲಿರುವ ಸಭೆ ನಡೆದಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv