ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಧಾನಕ್ಕೆ ಆಯ್ಕೆಯಾಗಿದ್ದು, ಈ ಮೂಲಕ ಸ್ವತಃ ಪುತ್ರ ಸಿಎಂ ಕುಮಾರಸ್ವಾಮಿಯವರಿಂದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಹೌದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಮಾಡಲು ಶಿಫಾರಸ್ಸು ಮಾಡಿತ್ತು. ಹೀಗಾಗಿ ಸಮಿತಿ ಶಿಫಾರಸ್ಸಿನಂತೆ ರಾಜ್ಯ ಸರ್ಕಾರ ಮಾಜಿ ಪ್ರಧಾನಿಯವರ ಹೆಸರನ್ನು ಅಂತಿಮಗೊಳಿಸಿತ್ತು.
ಬುಧವಾರ ವಿಧಾನಸೌಧದಲ್ಲಿ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿರುವ ಎಲ್ಲಾ ಸಾಧಕರಿಗೂ ಖುದ್ದು ಸಿಎಂ ಕುಮಾರಸ್ವಾಮಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಮಾಜಿ ಪ್ರಧಾನಿಗಳಾದ ದೇವೇಗೌಡರು ತಮ್ಮ ಪುತ್ರ ಸಿಎಂ ಕುಮಾರಸ್ವಾಮಿಯವರಿಂದ ಪ್ರಶಸ್ತಿ ಹಾಗೂ ಗೌರವ ಪಡೆದುಕೊಳ್ಳಲಿದ್ದಾರೆ.
ಸಾಮಾನ್ಯವಾಗಿ ತಂದೆಯಿಂದ ಪುತ್ರನಿಗೆ ಪ್ರಶಸ್ತಿ ಸ್ವೀಕರಿಸುವುದನ್ನು ಕಾಣುತ್ತೇವೆ. ಆದರೆ ಬುಧವಾರ ನಡೆಯಲಿರುವ ಸಮಾರಂಭದಲ್ಲಿ ಪುತ್ರನ ಕೈಯಿಂದ ತಂದೆಯೊಬ್ಬರು ಪ್ರಶಸ್ತಿ ಸ್ವೀಕರಿಸುವ ಮೂಲಕ ವಿಶೇಷ ಹಾಗೂ ಅಪರೂಪದ ಸನ್ನಿವೇಶಕ್ಕೆ ವಿಧಾನಸೌದ ಸಜ್ಜಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv