ಸಾಂದರ್ಭಿಕ ಚಿತ್ರ
ಕಲಬುರಗಿ: ರೈಲ್ವೇ ಹಳಿ ದಾಟುತ್ತಿದ್ದ ಕುರಿ ಹಿಂಡಿನ ಮೇಲೆ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ಟ್ರೈನ್ ಹರಿದ ಪರಿಣಾಮ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 100 ಕುರಿಗಳು ಸಾವಿಗೀಡಾದ ಘಟನೆ ಜಿಲ್ಲೆಯ ಸೇಡಂ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಕುರಿಗಾಹಿ ಅಂಬಲಪ್ಪ ಎಂಬವರಿಗೆ ಸೇರಿದ್ದ 100 ಕುರಿಗಳು ಸಾವನ್ನಪ್ಪಿವೆ. ಸೇಡಂ ಪಟ್ಟಣದ ಹೊರವಲಯದ ಬಳಿ ಇಂದು ಸಂಜೆ ರೈಲ್ವೇ ಹಳಿ ದಾಟುತ್ತಿದ್ದ ಕುರಿಗಳ ಹಿಂಡಿನ ಮೇಲೆ, ವಿಶಾಖಪಟ್ಟಣಮ್‍ನಿಂದ ಮುಂಬೈಗೆ ತೆರಳುತ್ತಿದ್ದ ಎಲ್‍ಟಿಟಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ಟ್ರೈನ್ ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 100 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.
ವಿಷಯ ತಿಳಿಯುತ್ತಿದ್ದಂತೆ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದ ಅಂಬಲಪ್ಪ ಎಂಬವರಿಗೆ ಸೇರಿದ್ದ ಕುರಿ ಹಿಂಡು ಇದಾಗಿದ್ದು, ಸುಮಾರು 10 ಲಕ್ಷ ಮೌಲ್ಯದ 100 ಕುರಿಗಳು ಮೃತಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ವಾಡಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv